Friday, October 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.15ಕ್ಕೆ ‘ಕೆ.ವಿ.ಶಂಕರಗೌಡ -109 ಒಂದು ನೆನಪು’ ವಿಚಾರ ಸಂಕಿರಣ

ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿಲ್ಲಾಡಳಿತ, ಕೆ.ವಿ.ಶಂಕರಗೌಡ ಅಧ್ಯಯನ ಪೀಠ, ಕರ್ನಾಟಕ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಅ.15ರ ಬೆಳಿಗ್ಗೆ 10.30ಕ್ಕೆ ಕೆ.ವಿ.ಶಂಕರಗೌಡ -109 ಒಂದು ನೆನಪು ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಮಂಡ್ಯ ನಗರ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘನ ಉಪಸ್ಥಿತಿಯಲ್ಲಿ ನಡೆಯಲಿದ್ದು, ಕನ್ನಡ ಸಂಸ್ಕೃತಿ ಇಲಾಖೆಗೆ ನಿರ್ದೇಶಕರಾದ ಡಾ.ಕೆ.ಧರಣೀದೇವಿ ಮಾಲಗತ್ತಿ ಉದ್ಘಾಟಿಸುವರು ಎಂದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ರಾಗೌ ಆಶಯ ನುಡಿಗಳನ್ನಾಡುವರು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಪಿಇಟಿ ಅಧ್ಯಕ್ಷ ವಿಜಯ್ ಆನಂದ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಡಾ.ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕಸಾಪ ಜಿಲ್ಲಾ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ ಭಾಗವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕಿ ಎಚ್.ಆರ್.ಸುಜಾತ ಉಪಸ್ಥಿತರಿರಲಿದ್ದು, ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಮಧ್ಯಾಹ್ನ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಗೆ ಕೆ.ವಿ.ಶಂಕರಗೌಡರ ಕೊಡುಗೆ ಸಂಬಂಧ ಹಿರಿಯ ಸಾಹಿತಿ ಡಾ.ರಾಜಪ್ಪ ದಳವಾಯಿ ಉಪಸ್ಥಿತಿಯಲ್ಲಿ ವಿಚಾರ ಗೋಷ್ಠಿ, ಮಂಡ್ಯ ಜಿಲ್ಲೆಯ ಸಾಮಾಜೋ- ಆರ್ಥಿಕ ಮುನ್ನಡೆಗೆ ಕೆ.ವಿ.ಶಂಕರಗೌಡರ ಕೊಡುಗೆ ಸಂಬಂಧ ಕುರಿತು ಡಾ.ಬಿ.ಆರ್.ರವಿಕಾಂತೇಗೌಡರ ಉಪಸ್ಥಿತಿಯಲ್ಲಿ ವಿಚಾರಗೋಷ್ಠಿ,  ಸ್ವಾತಂತ್ರ್ಯ ನಂತರದ ಕರ್ನಾಟಕ ರಾಜಕೀಯದಲ್ಲಿ ಕೆ.ವಿ.ಶಂಕರಗೌಡರ ಸ್ಥಾನ ವಿಚಾರ ಡಾ.ಎಸ್.ಬಿ.ಶಂಕರಗೌಡರ ಉಪಸ್ಥಿತಿಯಲ್ಲಿ ವಿಚಾರಗೋಷ್ಠಿಗಳು ನಡೆಯಲಿವೆ ಎಂದು ಹೇಳಿದರು.

ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತೆ ಮತ್ತೆ ಶಂಕರಗೌಡ ಪುಸ್ತಕ ಬಿಡುಗಡೆ ಮಾಡುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶವರಾಜ ಎಸ್.ತಂಗಡಗಿ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ಪಿ.ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಬಿ.ರಾಮಕೃಷ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಭಾಗವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು, ನಿರ್ದೇಶಕ ನಾಗಪ್ಪ, ತಗ್ಗಹಳ್ಳಿ ವೆಂಕಟೇಶ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!