Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜು.25ಕ್ಕೆ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಸಮಾರಂಭ

ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಜಿಲ್ಲೆ 268 ಎಸ್ ಹಾಗೂ ನಂಜಮ್ಮ ಮೋಟೆಗೌಡ ಚಾರಿಟೇಬಲ್ ಟ್ರಸ್ಟ್ ಕೊಪ್ಪ ಇವರ ಆಶ್ರಯದಲ್ಲಿ ಕೆವಿ ಶಂಕರಗೌಡರ 109ನೇ ಜನ್ಮದಿನದ ಪ್ರಯುಕ್ತ ನಿತ್ಯ ಸಚಿವ ಕೆ ವಿ ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜುಲೈ 25ರಂದು ಮಧ್ಯಾಹ್ನ 3 ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಜಿಲ್ಲೆ 268 ಎಸ್ ರಾಜ್ಯಪಾಲರಾದ ಕೆ ಟಿ ಹನುಮಂತು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಈ ಪ್ರಶಸ್ತಿಯನ್ನು ಜಿಲ್ಲಾಮಟ್ಟದಲ್ಲಿ ನೀಡಲಾಗುತ್ತಿದ್ದು ,ಈ ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ,ಪ್ರಶಸ್ತಿಗೆ ಕನಕಪುರದ ರೂರಲ್ ಕಾಲೇಜನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಅಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದರು.

ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ಕೆ.ಟಿ. ಶ್ರೀಕಂಠೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ ಅಲ್ಸೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ.ಭೈರಿ ,ಕರ್ನಾಟಕ ಸಂಘದ ಅಧ್ಯಕ್ಷ ಪ್ರೊಫೆಸರ್ ಜಯಪ್ರಕಾಶ್ ಗೌಡ ,ಪಿಇ ಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್,ಆರ್ ಎ ಪಿ ಸಿ ಎಂ ಎಸ್ ಅಧ್ಯಕ್ಷ ಯು. ಸಿ .ಶೇಖರ್, ಜಿಲ್ಲೆ 268 ಎಸ್ 1ನೇ ಉಪ ರಾಜ್ಯಪಾಲ ಹೆಚ್ ಮಾದೇಗೌಡ ,ಎರಡನೇ ಉಪರಾಜ್ಯಪಾಲ ಕೆ ಆರ್ ಶಶಿಧರ, ಸಂಪುಟ ಕಾರ್ಯದರ್ಶಿ ಕೆ ಎಸ್ ಚಂದ್ರಶೇಖರ್, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಡೇವಿಡ್ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕಾರಸವಾಡಿ ಮಹದೇವು, ಡೇವಿಡ್, ರತ್ನಮ್ಮ, ಮಂಜುನಾಥ್, ಎನ್.ಶೇಖರ್ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!