Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಕ್ಯಾತನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ರಾಜೇಶ್ ಆಯ್ಕೆ

ಮಳವಳ್ಳಿ ತಾಲೂಕಿನ ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಜೇಶ್ ಪ್ರಚಂಡ ಗೆಲುವು ಸಾಧಿಸಿದರು.

17 ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ರಾಜೇಶ್ ಮತ್ತು ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ದ್ರಾಕ್ಷಾಯಿಣಿ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಜೇಶ್ 12 ಮತ, ಮೈತ್ರಿ ಅಭ್ಯರ್ಥಿ ದ್ರಾಕ್ಷಾಯಿಣಿ 5 ಮತ ಪಡೆದು ಸೋಲನ್ನಪ್ಪಿದರು. 12 ಮತ ಪಡೆದುಕೊಂಡ ರಾಜೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪೂಜಾಶ್ರೀ ಘೋಷಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾರ್ಥಸಾರಥಿ ಹಾಜರಿದ್ದರು.

ಫಲಿತಾಂಶ ಘೋಷಣೆ ಯಾಗುತ್ತಿದ್ದಂತೆ ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಅಭಿನಂದಿಸಿದರು. ಜೊತೆಗೆ ಹಲವಾರು ಕಾಂಗ್ರೆಸ್ ಮುಖಂಡರು ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ರಾಜೇಶ್, ತಮ್ಮನ್ನು ಆಯ್ಕೆ ಮಾಡಲು ಕಾರಣರಾದ ಶಾಸಕ ರಾದ ಪಿ ಎಂ ನರೇಂದ್ರಸ್ವಾಮಿ ಮತ್ತು ಸದಸ್ಯರುಗಳಿಗೆ ಹಾಗೂ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದರು.

ನಮ್ಮ ಪಂಚಾಯಿತಿಗೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ಮೊದಲಿಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತೇನೆ. ಸರ್ಕಾರದ ನಿರ್ದೇಶನದಂತೆ ಪೌತಿ ಖಾತೆ ಆಂದೋಲನ ಶೀಘ್ರ ಗತಿಯಲ್ಲಿ ನಿರ್ವಹಣೆ ಮಾಡಿಸುತ್ತೇನೆ, ಪ್ರತಿ ಗ್ರಾಮಗಳು ನನ್ನ ಗ್ರಾಮ ಎಂದು ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಮುಖಂಡರುಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ