Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾರ್ಮಿಕರ ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಪರಿಹಾರ

ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಶಾಶ್ವತ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಅಧ್ಯಕ್ಷ ರಾಮಕೃಷ್ಣ ಹೇಳಿದರು.

ಮಂಡ್ಯ ನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಆಯೋಜಿಸಿದ್ದ ಕಾರ್ಮಿಕರ ಸಮ್ಮೇಳನ ಆಯೋಜನೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ನೀಡುವ ಮತ್ತು ಕಂಡುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯವಾಗಬೇಕಿದೆ. ಅಸಂಘಟಿತ ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟಿತರನ್ನಾಗಿ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ನುಡಿದರು.

ಜನವರಿ 27ರಂದು ಮಂಡ್ಯ ನಗರದಲ್ಲಿ ಕಾರ್ಮಿಕರ ಸಮ್ಮೇಳನ ಆಯೋಜನೆಗೆ ಸಿದ್ದತೆ ನಡೆಸಿದ್ದೇವೆ. ಕಾರ್ಮಿಕ ವಿಭಾಗದ ಎಲ್ಲಾ ಪದಾಧಿಕಾರಿಗಳು ಸಕ್ರಿಯರಾಗಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕಾರ್ಮಿಕರ ಸಮ್ಮೇಳನಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರು ಮತ್ತು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಕಾಯಾಧ್ಯಕ್ಷ ಯತೀಶ್, ಗ್ರಾ.ಪಂ. ಸದಸ್ಯ ಮಧುಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಕರಿಯಪ್ಪಚಾರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಶಂಕರ್, ಜಿಲ್ಲಾ ಪ್ರ.ಕಾರ್ಯದರ್ಶಿ ಆಟೋ ಕೃಷ್ಣ, ನಗರಾಧ್ಯಕ್ಷ ಶಿವರುದ್ರ, ಉಪಾಧ್ಯಕ್ಷೆ ಗೀತಮ್ಮ, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!