Thursday, September 19, 2024

ಪ್ರಾಯೋಗಿಕ ಆವೃತ್ತಿ

ಲಹರಿ ವೇಲು ವಿರುದ್ಧ ನಟಿ ರಮ್ಯಾ ಗರಂ

ಲಹರಿ ವೇಲು ಅವರಿಗೆ ಬಿಜೆಪಿ ಟಿಕೆಟ್‌ ಬೇಕಾಗಿರಬಹುದು. ಅದಕ್ಕಾಗಿ ಅವರು ಪ್ರಯತ್ನಿಸುತ್ತಿರಬಹುದು. ಆ ಕಾರಣಕ್ಕಾಗಿ ಅವರು ಕಾಂಗ್ರೆಸ್ ನಾಯಕರ ಮೇಲೆ ದೂರು ದಾಖಲಿಸಿರಬಹುದು ಎಂದು ಕಾಂಗ್ರೆಸ್ ನಾಯಕಿ ಹಾಗೂ ಚಿತ್ರ ನಟಿ ರಮ್ಯಾ ಕಿಡಿಕಾರಿದ್ದಾರೆ.

ಲಹರಿ ವೇಲು ಅವರು ರಾಜಕೀಯಕ್ಕೆ ಬರುವುದಕ್ಕಾಗಿ ಇತಂಹ ಕೆಲಸ ಮಾಡುತ್ತಿರಬಹುದು ಎಂದು ರಮ್ಯಾ ಟ್ವೀಟ್ ಮಾಡಿದ್ದು, ವೇಲು ಅವರು ಈ ರೀತಿ ಮಾಡುತ್ತಿರುವುದು ಬೇಸರದ ಸಂಗತಿ ಎಂದಿದ್ದಾರೆ.

ಭಾರತ್‌ ಜೋಡೋ ಯಾತ್ರೆಯಲ್ಲಿ `ಕೆಜಿಎಫ್‌ ಚಾಪ್ಟರ್‌ 2′ ಸಂಗೀತವನ್ನು ಅನುಮತಿ ಇಲ್ಲದೇ ಬಳಸಿರುವುದು ಕಾಂಗ್ರೆಸ್‌ಗೆ ಮುಳುವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಟ್ವಿಟರ್‌ ಖಾತೆಗಳನ್ನು ತಾತ್ಕಾಲಿಕವಾಗಿ ನ.21ರವರೆಗೆ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು  ನಿರ್ಬಂಧಿಸುವಂತೆ ಕೋರ್ಟ್ ಆದೇಶಿಸಿತ್ತು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾರೆ. ಹೀಗಿರುವಾಗಲೇ ಕಾಂಗ್ರೆಸ್‌ ವಿರುದ್ಧ ಖ್ಯಾತ ಆಡಿಯೋ ಸಂಸ್ಥೆ ಕಾಪಿ ರೈಟ್‌ ಆಕ್ಟ್‌ ಪ್ರಕಾರ ದೂರು ನೀಡಿದ್ದು, ಅನುಮತಿ ಪಡೆಯದೆ, ‘ಕೆಜಿಎಫ್‌​ 2’ ಚಿತ್ರದ ಹಿಂದಿ ಅವತರಣಿಕೆಯ `ಸುಲ್ತಾನ್’ ಹಾಡನ್ನು ಬಳಕೆ ಮಾಡಲಾಗಿತ್ತು.

ಈ ಕಾರಣಕ್ಕೆ ರಾಹುಲ್ ಗಾಂಧಿ ಮಾತ್ರವಲ್ಲದೆ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಶ್ರೀನೆಟ್ ಮತ್ತು ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಮ್ ರಮೇಶ್ ವಿರುದ್ಧ ಹಿಂದಿ ಅವತರಿಣಿಕೆಯ ಹಕ್ಕನ್ನು ಹೊಂದಿರುವ ಎಂಆರ್‌ಟಿ ಆಡಿಯೋ ಸಂಸ್ಥೆ ಹಕ್ಕುಸ್ವಾಮ್ಯ ಉಲ್ಲಂಘನೆ ಪ್ರಕರಣ ದಾಖಲಿಸಿದೆ.

“>

ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್, ಇನ್ಟ್ಸಾಗ್ರಾಮ್, ಟ್ವಿಟರ್ ಮುಂತಾದ ವಿದ್ಯುನ್ಮಾಧ್ಯಮಗಳಲ್ಲಿ ತಮ್ಮ ನೆಚ್ಚಿನ ನಾಯಕರಿಗೆ ತಮ್ಮ ಇಷ್ಟದ ಹಾಡನ್ನು ಸಂಯೋಜಿಸಿ, ವಿಡಿಯೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡುವುದು ಸಾಮಾನ್ಯವಾಗಿದೆ.

ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರಿಗೆ ಟಗರ್ ಸಿನಿಮಾದ ಸಾಂಗ್ ಅನ್ನು ಹಾಕಿಕೊಳ್ಳುವುದು, ಯಡಿಯೂರಪ್ಪ ಅವರಿಗೆ ರಾಜಾಹುಲಿ ಸಾಂಗ್ ಅನ್ನು ಎಡಿಟ್ ಮಾಡಿ ಕೂರಿಸುವುದು, ಹೆಚ್.ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ”ವೀರ ಪರಂಪರೆ” ಸಿನಿಮಾದ ”ನನ್ನ ಮಣ್ಣಿದು” ಸಾಂಗ್ ಗಳನ್ನು ಎಡಿಟ್ ಮಾಡಿಕೊಂಡು ಪೋಸ್ಟ್ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಈಗಿರುವಾಗ ‘ಕೆಜಿಎಫ್‌​ 2′ ಚಿತ್ರ ಸಾಂಗ್ ಬಳಕೆ ಮಾಡಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಮೇಲೆ ದೂರು ದಾಖಲಿಸಿರುವುದರ ಹಿಂದೆ ಯಾವ ಉದ್ದೇಶವಿದೆ ಎಂದು ತಿಳಿಯಬೇಕಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!