Tuesday, May 21, 2024

ಪ್ರಾಯೋಗಿಕ ಆವೃತ್ತಿ

ಗೃಹಲಕ್ಷ್ಮಿ ಉದ್ಘಾಟನಾ ಸಮಾರಂಭಕ್ಕೆ ಮಂಡ್ಯದಿಂದ 25,000 ಮಂದಿ: ಚಲುವರಾಯಸ್ವಾಮಿ

ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯಲ್ಲಿ 25 ಸಾವಿರ ಫಲಾನುಭವಿಗಳನ್ನು 466 ಬಸ್ ಗಳಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದ್ದು, ಇದಕ್ಕಾಗಿ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ನಗದು ಸೌಲಭ್ಯ ಲೋಕಾರ್ಪಣೆ ಕಾರ್ಯಕ್ರಮದ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಡಿಯುವ ನೀರು, ಉಪಹಾರ ಸೇರಿದಂತೆ ಮೂಲಭೂತ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಹಾಗೂ ಕಾರ್ಯಕ್ರಮ ಮುಗಿದ ನಂತರ ಫಲಾನುಭವಿಗಳನ್ನು ಸುರಕ್ಷಿತವಾಗಿ ಗ್ರಾಮಗಳಿಗೆ ಕರೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಗಸ್ಟ್ 30 ರಂದು ಚಾಲನೆ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ತಿಳಿಸಿದರು.

ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಯೋಜನೆಯಾದ ಗೃಹಲಕ್ಷ್ಮಿಗೆ ಈಗಾಗಲೇ ಶೇ 89 ರಷ್ಟು ಜನರು ನೋಂದಣಿಯಾಗಿದ್ದು, ಇನ್ನುಳಿದ ಶೇ 11 ಜನ ತಾಂತ್ರಿಕ ಕಾರಣಗಳಿಂದ ನೊಂದಾಣಿ ಬಾಕಿ ಇರುತ್ತದೆ ಎಂದರು.

ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಹಿನ್ನಲೆಯಲ್ಲಿ ಮಹಿಳೆಯರು ತಮ್ಮ ಮನೆಯ ಮುಂದೆ ನಾ ಯಜಮಾನಿ ಎಂದು ರಂಗೋಲಿ ಬಿಡಿಸಿ ಯೋಜನೆಯನ್ನು ಮನೆಗೆ ಬರಮಾಡಿಕೊಳ್ಳಿ ಎಂದು ಕೋರಿದರು.

ಗೃಹಲಕ್ಷ್ಮಿ ಯೋಜನೆಗೆ 4,15,620 ಮಹಿಳೆಯರು ನೊಂದಣಿ

ಮಂಡ್ಯ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ 4,77,561 ಮಹಿಳೆಯರು ಅರ್ಹರಿದ್ದು, ಆಗಸ್ಟ್ 28 ರವರೆಗೆ 4,15,620 ಮಹಿಳೆಯರು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಜಿಲ್ಲೆಯಲ್ಲಿ ನೊಂದಣಿಗಾಗಿ 479 ಕೇಂದ್ರಗಳನ್ನು ತೆರೆಯಲಾಗಿತ್ತು. ಆಗಸ್ಟ್ 30 ರಂದು ನಡೆಯುವ ಕಾರ್ಯಕ್ರಮಕ್ಕೆ ಕೆ.ಆರ್ ಪೇಟೆ-38, ಮದ್ದೂರು-81, ಮಳವಳ್ಳಿ-82, ಮಂಡ್ಯ-100, ನಾಗಮಂಗಲ-46, ಪಾಂಡವಪುರ-52 ಹಾಗೂ ಶ್ರೀರಂಗಪಟ್ಟಣ – 67 ಒಟ್ಟು 466 ಬಸ್ ಗಳಲ್ಲಿ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಪಿ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ ಸಿಇಒ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ರಾಮಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!