Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ‘ನರೇಗಾ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ’ಕ್ಕೆ ಚಾಲನೆ

ಮಂಡ್ಯ ತಾಲ್ಲೂಕು ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು 46 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ತಾಲ್ಲೂಕು ಪಂಚಾಯಿತಿ  ಕಾರ್ಯ ನಿರ್ವಾಹ ಕಾಧಿಕಾರಿಗಳಾದ ಎಂ.ಎಸ್ ವೀಣಾ ತಿಳಿಸಿದರು.

ಮಂಡ್ಯ ತಾಲ್ಲೂಕಿನ 46 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾ ನಡಿಗೆ ಸುಸ್ಥಿರತೆಯ ಕಡೆಗೆ ಅಭಿಯಾನದಡಿ ಮನೆ ಮನೆ ಜಾಥಾ, ಕರಪತ್ರ ಹಂಚಿಕೆ, ರೋಜ್ ಗಾರ್ ಕಾರ್ಯಕ್ರಮವನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಎಲ್ಲಾ ಗ್ರಾಮಗಳಲ್ಲಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಸೌಲಭ್ಯಗಳು , ವೈಯಕ್ತಿಕ ಸೌಲಭ್ಯ ಪಡೆಯಲು ಇರಬೇಕಾದ ಆರ್ಹತೆಗಳು, ಯೋಜನೆಯಡಿ ದೊರೆಯುವ ಪ್ರಕ್ರಿಯೆಯನ್ನು ಕೂಲಿಯ ಮೊತ್ತ, ಗಂಡು ಹೆಣ್ಣಿಗೆ ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ, ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಈ ಕುರಿತು ಐಇಸಿ ಚಟುವಟಿಕೆಗಳನ್ನು ಹಾಗೂ ಸ್ವಚ್ಚವಾಹಿನಿ ಬಳಸಿಕೊಂಡು ಸಾರ್ವಜನಿಕರಿಗೆ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಕಾಮಗಾರಿ ಬೇಡಿಕೆ ಪೆಟ್ಟಿಗೆಯನ್ನು ಮನೆ ಮನೆಗೆ ತೆರಳಿ ಪಡೆಯಲಾಗುತ್ತಿದೆ ಎಂದರು.

ಕೆಲಸದ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50 ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಆಕುಶಲ ಮಹಿಳೆಯರು ನಿರ್ವಹಿಸುವ ಕೆಲಸಕ್ಕೆ ಶೇ.20ರಷ್ಟು ಪ್ರಮಾಣದಲ್ಲಿ ರಿಯಾಯಿತಿ, ಸ್ವಸಹಾಯ ಸಂಘಗಳಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯಗಳು ಹಾಗೂ ಯೋಜನೆಯಡಿ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಒದಗಿಸಿ, ಕೂಲಿ ಬೇಡಿಕೆ ಹಾಗೂ ಕಾಮಗಾರಿ ಬೇಡಿಕೆಯನ್ನು ಹಾಗೂ ಕೆಲಸದ ಅರ್ಜಿಗಳನ್ನು ಅಭಿಯಾನದಡಿ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾ.ಉ) ಮಲ್ಲೇಶ್ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಯೋಜನೆಯ ಸಿಬ್ಬಂದಿಗಳಾದ ಟಿಸಿ, ಟಿಎಂಐಎಸ್, ಐಇಸಿ, ಟಿಎಇಗಳು, ಬಿಎಪ್ಟಿಗಳು, ಜಿಕೆಎಂಗಳು ಹಾಗೂ ತಾ.ಪಂ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!