Friday, September 20, 2024

ಪ್ರಾಯೋಗಿಕ ಆವೃತ್ತಿ

ಮಾಜಿ ಸಿಎಂ ಒಬ್ಬರ ಲೈಂಗಿಕ ಹಗರಣ ಬಹಿರಂಗಗೊಳಿಸುವ ಹೇಳಿಕೆ ನೀಡಿದ್ದ ವಕೀಲ ಜಗದೀಶ್ ಬಂಧನ

ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್‌ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ವಕೀಲ ಜಗದೀಶ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಇಂದು ಲಾಯರ್ ಜಗದೀಶ್ ಅವರನ್ನು ಅರೆಸ್ಟ್ ಮಾಡಿರುವುದಾಗಿಯು ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಅವರ ಆಪ್ತರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಖಾತ್ರಿಪಡಿಸಿದ್ದು,ವಕೀಲ  ಜಗದೀಶ್ ಅವರನ್ನು ಕೋಡಿಹಳ್ಳಿ ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆದರೆ ಯಾವ ಕಾರಣಕ್ಕೆ ಅವರನ್ನು ಬಂಧಿಸಿದ್ದಾರೆ. ಯಾವ ಆಧಾರದ ಮೇಲೆ ಬಂಧಿಸಿದ್ದಾರೆ ಎಂಬುದು ತಿಳಿದುಬಂದಿಲ್ಲ. ಈ ಕುರಿತು ನಾಳೆ ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ಹಗರಣ ಸಿಡಿ ವಿಷಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಜನಪ್ರಿಯತೆ ಗಳಿಸಿದ್ದ ವಕೀಲ ಜಗದೀಶ್ ಕುಮಾರ್‌ ಅವರು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕರಣದ ಕುರಿತು ಮಾಹಿತಿಯನ್ನು ಹೊರಗೆಡವಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ತಮ್ಮ ಅಧಿಕಾರವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯದ ಮತ್ತು ಪರ ರಾಜ್ಯದ ಹಲವು ನಟಿಯರಿಗೆ ಐಷಾರಾಮಿ ಕಾರು, ಬಂಗಲೆ ನೀಡಿ ಲೈಂಗಿಕ ಸಹಕಾರ ಪಡೆದಿದ್ದಾರೆ.

ಅಲ್ಲದೆ, ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಇಬ್ಬರು ವೈದ್ಯರು ಮುಖ್ಯಮಂತ್ರಿ ನಟಿಯರೊಂದಿಗೆ ಇರುವ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಅವರನ್ನು ಬ್ಲಾಕ್‌ಮೇಲ್‌ ಮಾಡಿ ತಮಗೆ ಬೇಕಾದ ಕಡತಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ. ಆ ನಟಿಯರಿಗೆ ದುಬಾರಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಷಯದಲ್ಲಿ ಸರ್ಕಾರದ ಆಡಳಿತ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಆದರೆ, ಈ ಬಗ್ಗೆ ನಟಿಯರಿಂದ ದೂರು ಕೊಡಿಸುವುದಾಗಲೀ, ಅಥವಾ ಸಿಡಿ ಬಿಡುಗಡೆ ಮಾಡುವುದಾಗಲೀ ಮಾಡುವುದಿಲ್ಲ. ಬದಲಾಗಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್‌ಗೆ ಸಾಕ್ಷ್ಯಾಧಾರ ಸಹಿತ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದರು.

ಬಂಧನವಾಗಿತ್ತು ಏಕೆ ಗೊತ್ತಾ ?

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರಿ ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಮಾಹಿತಿ ಪಡೆದ ಕೊಡಿಹಳ್ಳಿ ಪೊಲೀಸರು ಆತನನ್ನು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!