Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಾಜ್ಯಮಟ್ಟದ ವಕೀಲರ ಕ್ರೀಡಾಕೂಟ

ಮಂಡ್ಯ ಜಿಲ್ಲಾ ವಕೀಲರ ಸಂಘದ ವತಿಯಿಂದ ರಾಜ್ಯ ಮಟ್ಟದ ವಕೀಲರ ಕ್ರೀಡಾಕೂಟವನ್ನು ಡಿ.8-ರಿಂದ 10 ರವರೆಗೆ ಆಯೋಜಿಸಿದ್ದು, ರಾಜ್ಯದ ಸುಮಾರು 1,500 ರಿಂದ 2000 ವಕೀಲ ಸ್ಪರ್ಧಿಗಳು (ಕ್ರೀಡಾ ಪಟುಗಳು) ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆಂದು ಸಂಘದ ಅಧ್ಯಕ್ಷ ರಾಜೇಂದ್ರ ಎಂ.ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಕ್ರಿಕೆಟ್, ಬ್ಯಾಡ್ಮಿಂಟನ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳು ನಡೆಯಲಿದೆ, ಎಲ್ಲಾ ಸ್ಪರ್ಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಈಗಾಗಲೇ ರಾಜ್ಯದ ಎಲ್ಲಾ ವಕೀಲರ ಸಂಘಗಳ ಸ್ಪರ್ಧಿಗಳು ಮತ್ತು ತಂಡ ಹೆಸರುಗಳನ್ನು ನೊಂದಾಯಿಸಿಕೊಂಡಿದ್ದಾರೆಂದು ತಿಳಿಸಿದರು.

ಡಿ.08ರಂದು ಬೆಳಗ್ಗೆ 9.30 ಗಂಟೆಗೆ ಉದ್ಘಾಟನಾ ಸಮಾರಂಭವನ್ನು ನಮ್ಮ ವಕೀಲರ ಸಂಘದ ಆವರಣದಲ್ಲಿ ಏರ್ಪಡಿಸಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್‌ನ ಅಧ್ಯಕ್ಷ ಹೆಚ್.ಎಲ್. ವಿಶಾಲರಘು ನೆರವೇರಿಸುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಂದ್ರರವರು ವಹಿಸುವವರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ, ವಿಧಾನ ಪರಿಷತ್‌ನ ಸದಸ್ಯ ಮಧು ಜಿ.ಮಾದೇಗೌಡ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಅಪರ ಜಿಲ್ಲಾಧಿಕಾರಿ ಹೆಚ್.ಎಲ್‌. ನಾಗರಾಜು, ಜನತಾ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷವಿಜಯ್ ಆನಂದ, ಹಿರಿಯ ವಕೀಲರಾದ ಆರ್.ಎಸ್. ರವಿ, ಅನಿಲ್‌ ಕುಮಾರ್, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಟಿ.ಜಿ. ರವಿ, ಜನತಾ ಶಿಕ್ಷಣ ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಕೆ.ಆರ್. ದಯಾನಂದ್ ಹಾಗೂ ಮಂಡ್ಯ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಭಾಗವಹಿಸುವವರು ಎಂದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ.ಮಹೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!