Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪಾಂಡವಪುರ ಉಪವಿಭಾಗಾಧಿಕಾರಿ ವಿರುದ್ದ ವಕೀಲರ ಪ್ರತಿಭಟನೆ

ಜಮೀನು ವ್ಯಾಜ್ಯ ಪ್ರಕರಣ ವಿಚಾರವಾಗಿ ಭೇಟಿ ಮಾಡಿ ಚರ್ಚಿಸಲು ಮುಂದಾದ ವಕೀಲ ಅಮಿತ್ ಅವರೊಂದಿಗೆ ಅಧಿಕಾರ ದುರ್ಬಳಕೆ ಮಾಡಿ ದರ್ಪ ಪ್ರದರ್ಶಿಸಿದ್ದಾರೆಂದು ಆರೋಪಿಸಿ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ ಆರ್ ಶ್ರೀನಿವಾಸ್ ವಿರುದ್ದ ವಕೀಲರು ಬುಧವಾರ ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಮಂಡ್ಯ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ನ್ಯಾಯಾಲಯ ಕಲಾಪದಿಂದ ಹೊರಗುಳಿದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪಾಂಡವಪುರ ಉಪ ವಿಭಾಗಾಧಿಕಾರಿ ದುರ್ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ಕೆ ಆರ್ ಪೇಟೆಯ ವಕೀಲ ಅಮಿತ್ ಎರಡು ದಿನಗಳ ಹಿಂದೆ ಜಮೀನು ವ್ಯಾಜ್ಯ ಪ್ರಕರಣ ವಿಚಾರವಾಗಿ ಪಾಂಡವಪುರದ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ಕೆ ಆರ್ ಶ್ರೀನಿವಾಸ್ ಅವರನ್ನು ಭೇಟಿಯಾಗಲು ಬಯಸಿದಾಗ, ದರ್ಪದಿಂದ ವರ್ತಿಸಿ ಕನಿಷ್ಠ ಗೌರವವನ್ನು ನೀಡದೆ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿ ವಕೀಲನನ್ನು ವಶಕ್ಕೆ ನೀಡಿರುವುದು ಮತ್ತು ವಕೀಲ ಅಮಿತ್ ಅವರನನ್ನು ಪೊಲೀಸರು ಠಾಣೆಯಲ್ಲಿ ಸುಮಾರು ಮೂರು ತಾಸುಗಳ ಕಾಲ ಕಾನೂನು ಬಾಹಿರವಾಗಿ ಬಂಧನದಲ್ಲಿ ಇರಿಸಿ ದೌರ್ಜನ್ಯ ಎಸಗಿರುವುದು ಅಪರಾಧವಾಗಿದೆ ಎಂದು ಕಿಡಿಕಾರಿದರು.

ವಕೀಲರ ಮೇಲೆ ಈ ರೀತಿ ದೌರ್ಜನ್ಯಎಸಗಿರುವ ಪಾಂಡವಪುರ ಉಪವಿಭಾಗಾಧಿಕಾರಿ ಸಾಮಾನ್ಯ ಜನತೆ ಮತ್ತು ರೈತರ ಜೊತೆ ಯಾವ ರೀತಿ ವರ್ತಿಸಬಹುದು ಎಂಬುದನ್ನು ಊಹಿಸಲು ಸಹ ಅಸಾಧ್ಯವಾಗಿದೆ. ಆದ್ದರಿಂದ ಉಪವಿಭಾಗಾಧಿಕಾರಿ ಕೆ ಆರ್ ಶ್ರೀನಿವಾಸ್ ಅವರನ್ನ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಪ್ರಕರಣ ಕುರಿತಂತೆ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಉಪವಿಭಾಗಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ವಕೀಲರಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲದಿದ್ದರೆ ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ಟಿ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ.ಮಹೇಶ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ