Wednesday, June 12, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸರ್ಕಾರದ ಸಾಧನೆಗಳ ಕರಪತ್ರ ಹಂಚಿಕೆ

ಶ್ರೀರಂಗಪಟ್ಟಣ ನಗರದಲ್ಲಿಂದು ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಒಂಬತ್ತು ವರ್ಷ ಸಾಧನೆಗಳನ್ನು ಒಳಗೊಂಡಿರುವ ಕರಪತ್ರಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ನೆರವೇರಿಸಿದರು.

ಇಂದು ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರ ಜೊತೆಗೂಡಿದ ಸಚ್ಚಿದಾನಂದ ಮನೆ ಮನೆಗೆ ತೆರಳಿ ಜನರಿಗೆ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ನರೇಂದ್ರ ಮೋದಿಯವರ ಸರ್ಕಾರ 9 ವರ್ಷ ಪೂರೈಸಿದ್ದು,ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ.ಕಳೆದ ಒಂಭತ್ತು ವರ್ಷಗಳ ಅವಧಿಯಲ್ಲಿ ಈ ಹಿಂದಿನ‌ ಯಾವ ಸರ್ಕಾರಗಳು ಮಾಡದ ಅಭಿವೃದ್ಧಿ ಕಾರ್ಯಗಳನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ದೇಶದ ಜನರು ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!