Friday, May 17, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ತರಗತಿ ನಡೆಸಲು ತಡೆ : ಪೊಲೀಸರ ವಿರುದ್ದ ಉಪನ್ಯಾಸಕ ಪ್ರತಿಭಟನೆ

ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ತರಗತಿ ತೆಗೆದುಕೊಳ್ಳಲು ಹೋದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಮಿ ಹಾಕಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯ ನಗರದಲ್ಲಿ ಸೋಮವಾರ ರಾಜ್ಯ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಿ.ಎಸ್.ನಾಗರಾಜು ಏಕಾಂಗಿ ಪ್ರತಿಭಟನೆ ನಡೆಸಿದರು.

ಏ.20ರಂದು ಚುನಾವಣಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಇದಿದ್ದರಿಂದ ಕಲಾಭವನವನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಅಂದಿನ ತರಗತಿಗಳನ್ನು ಏ.28ರಂದು ತೆಗೆದುಕೊಳ್ಳುವಂತೆ ಮಂಡ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದರು, ಅದರಂತೆ ತರಗತಿ ತೆಗೆದುಕೊಳ್ಳಲು ತೆರಳಿದಾಗ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆಂದು ಅವರು ದೂರಿದರು.

ಕರ್ತವ್ಯ ನಿರ್ವಹಿಸಲು ತಾವು ಮಂಡ್ಯ ವಿವಿಗೆ ತೆರಳಿದಾಗ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪೊಲೀಸರು ಒಳಗಡೆ ಬಿಡಲಿಲ್ಲ. ನಂತರ ಕೆಲವರನ್ನು ಮಾತ್ರ ಒಳಗೆ ಹೋಗಲು ಅನುಮತಿಸಿದರು. ತರಗತಿ ಕೊಠಡಿ ಬಳಿ ಬಂದ ಡಿವೈಎಸ್‌ಪಿ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್ ಅವರು ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಇದನ್ನು ಪ್ರಶ್ನೆ ಮಾಡಿದಾಗ ಧಮ್ಮಿ ಹಾಕಿದರು. ಆದ್ದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!