Tuesday, September 17, 2024

ಪ್ರಾಯೋಗಿಕ ಆವೃತ್ತಿ

ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಮತ್ತೇ ಚುನಾವಣೆ: ಜೂ.13ಕ್ಕೆ ಮತದಾನ

ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದು ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚು.ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್.ಬೋಸರಾಜ್, ಕೆ.ಗೋವಿಂದರಾಜ್, ಡಾ.ತೇಜಶ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿ ಕುಮಾರ್, ಎಸ್.ರುದ್ರೇಗೌಡ, ಎಚ್.ಹರೀಶ್ ಕುಮಾರ್, ಬಿ.ಎಂ.ಫಾರೂಕ್ ಅವರ ಅವಧಿ ಕೊನೆಗೊಳ್ಳಲಿದೆ. ಈ ಹಿನ್ನೆಲೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

  • ಮೇ 27ರಂದು ಚುನಾವಣಾ ಅಧಿಸೂಚನೆ
  • ಜೂ. 3ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ
  • ಜೂ.4ರಂದು ನಾಮಪತ್ರ ಪರಿಶೀಲನೆ
  • ಜೂ.6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
  • ಜೂ. 13ರಂದು ಮತದಾನ
  • ಜೂ.13ರ ಸಂಜೆ 5 ಗಂಟೆಗೆ ಮತ ಎಣಿಕೆ

ವಿಧಾನಸಭೆಯ ಬಲಾಬಲದ ಪ್ರಕಾರ, ಒಟ್ಟು 11 ಸ್ಥಾನಗಳಲ್ಲಿ ಏಳು ಕಾಂಗ್ರೆಸ್ ಪಾಲಾಗಲಿವೆ ಎಂದು ಅಂದಾಜಿಸಲಾಗಿದೆ. ಇನ್ನು ಬಿಜೆಪಿಗೆ ಮೂರು ಮತ್ತು ಜೆಡಿಎಸ್​ಗೆ ಒಂದು ಸ್ಥಾನ ದೊರಕಲಿದೆ, ಇನ್ನು ಜಗದೀಶ್ ಶೆಟ್ಟರ್ ಅವರ ಸ್ಥಾನ ಕಾಂಗ್ರೆಸ್​ ತೆಕ್ಕೆಗೆ ಹೋಗಲಿದೆ. ​

ಈ ಮೊದಲು ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿತ್ತು, ಅದರಂತೆ ಜೂನ್ 3ರಂದು ಮತದಾನ ನಡೆಯಲಿದೆ. ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ.16 ಕೊ‌ನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮೇ.17ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!