ಮಂಡ್ಯ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಎಂ.ಶ್ರೀನಿವಾಸ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
ಕೆರಗೋಡು ಹೋಬಳಿಯ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಮಂಡ್ಯ ತಾಲ್ಲೂಕು ಬಸರಾಳು ಹೋಬಳಿ ದ್ಯಾಪಸಂದ್ರ ಗ್ರಾಮದಲ್ಲಿ 50 ಲಕ್ಷ ರೂ.ಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳ ಬೇಕು.ಜನರು ಗುತ್ತಿಗೆದಾರರ ಬಳಿ ಉತ್ತಮವಾಗಿ ಕೆಲಸ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.




