ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಅಂಕುಶಾಪುರ ಗ್ರಾಮದಲ್ಲಿ ಚಿರತೆ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇಂದು ಶನಿವಾರ ಸಂಜೆ 6 ಗಂಟೆಯ ಸಮಯದಲ್ಲಿ ಗ್ರಾಮದ ಸಮೀಪವೇ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ನಿಂತಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು, ಚಿರತೆಯಿಂದ ಏನಾದ್ರು ತೊಂದ್ರೆ ಆದ್ರೆ ಹೇಳಿ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ, ಏನಾದರೂ ಅನಾಹುತ ಆದ ನಂತರ ಅಧಿಕಾರಿಗಳು ಇಲ್ಲಿ ಬಂದು ಮಾಡುವುದು ಏನಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.




