Thursday, September 19, 2024

ಪ್ರಾಯೋಗಿಕ ಆವೃತ್ತಿ

ಕುಮಾರಸ್ವಾಮಿ ಮೊದಲು ಸಹೋದರನ ಆಸ್ತಿಯ ಲೆಕ್ಕ ನೀಡಲಿ: ಡಿ.ಕೆ ಶಿವಕುಮಾರ್

“ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸವಾಲೆಸೆದರು. ಮದ್ದೂರಿನಲ್ಲಿ ಜನಾಂದೋಲನ ಸಭೆಗೆ ಹೋಗುವ ಮುನ್ನ ಡಿಕೆಶಿ ಈ ಸವಾಲನ್ನು ಕುಮಾರಸ್ವಾಮಿಗೆ ಎಸೆದಿದ್ದಾರೆ.

ಕುಮಾರಸ್ವಾಮಿ ವಿರುದ್ದ ಏಕವಚನದಲ್ಲಿ ಹರಿಹಾಯ್ದ ಡಿಕೆಶಿ, ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರವನ್ನು ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ನನ್ನನ್ನು ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ನಾನು ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ ಎಂದು ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ?

ವಿಜಯೇಂದ್ರ ಹೇಳುತ್ತಾನೆ ಭ್ರಷ್ಟಾಚಾರದ ಪಿತಾಮಹ ನಾನು ಎಂದು. ನೀನು ಮೊದಲು ಹೇಳಪ್ಪ, ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲಾ ಆಯಿತು ಇದರ ಲೆಕ್ಕಾಚಾರ ಮೊದಲು ನೀಡು. ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ ಎಂದು ಡಿಕೆಶಿ, ಬಿಜೆಪಿ ನಾಯಕರ ಕಾಲೆಳೆದರು.

“ನಾನು, ನೀವು ಒಂದಾಗಿ ಸರ್ಕಾರ ಮಾಡಿದಾಗ, ನೀವು ಈ ಹಿಂದೆ ನಿಮ್ಮ ಅಣ್ಣ ಬಾಲಕೃಷ್ಣಗೌಡ ಎಂಬ ಅಧಿಕಾರಿ ಮೂಲಕ ನನ್ನ ತಂಗಿ, ಮಡದಿ, ಸಹೋದರ, ರವಿ ಅವರ ಮೇಲೆ ಕೇಸು ದಾಖಲಿಸಿದ್ದನ್ನು ಮರೆತಿದ್ದೆ. ಚಂದ್ರಪ್ಪ ಅವರಿಂದ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಯಾವ ರೀತಿ ಕೇಸು ದಾಖಲಿಸಿದ್ದಿರಿ ಎಂಬುದನ್ನು ನಾನು ಮರೆತಿದ್ದೆ” ಎಂದು ಡಿಕೆಶಿ ಹೇಳಿದ್ದರು.

ಕಳೆದ ಒಂದು ವರ್ಷದಲ್ಲಿ ಅವುಗಳನ್ನು ನೆನೆಸಿಕೊಳ್ಳುವಂತೆ ಮಾಡಿದ್ದೀರಿ. ಇದಕ್ಕೆಲ್ಲಾ ಉತ್ತರ ಕೊಡಲು, ಚರ್ಚೆ ಮಾಡಲು ಸಿದ್ಧನಾಗಿದ್ದೇನೆ. ಮುಂದಿನ ಅಧಿವೇಶನದಲ್ಲಾದರೂ ಚರ್ಚೆಗೆ ಕಳಿಸಿ. ನಿಮ್ಮ ಅನಿಷ್ಟಗಳು, ನಿಮ್ಮ ಸಹೋದರ ಬಾಲಕೃಷ್ಣಗೌಡನ ಆಸ್ತಿಗಳ ಬಗ್ಗೆ ಚರ್ಚೆ ಮಾಡೋಣ. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾನೆ ಎಂದು ಬಯಲು ಮಾಡಲು ಸಿದ್ಧನಿದ್ದೇನೆ ಎಂದು ಡಿಕೆಶಿ ಗುಡುಗಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!