Friday, September 20, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣುಭ್ರೂಣ ಹತ್ಯೆ ಕರಾಳ ದಂಧೆಕೋರರಿಗೆ ಶಿಕ್ಷೆಯಾಗಲಿ: ಕೆ.ನಾಗಣ್ಣಗೌಡ

ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದ್ದು, ಸಮಗ್ರ ತನಿಖೆ ನಡೆಸಿ ಇದರ ಮೂಲ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.

ಮಂಡ್ಯ ತಾಲೂಕಿನ ಹಾಡ್ಯದ ಆಲೆ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ಆವರು, ಆಧುನಿಕ ಕಾಲದಲ್ಲೂ ಹೆಣ್ಣು ಗಂಡು ಎಂದು ತಾರತಮ್ಯ ಮಾಡಿ ಗರ್ಭದಲ್ಲಿಯೇ ಭ್ರೂಣ ಪತ್ತೆಗೆ ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದರು.

ಹಣಕ್ಕಾಗಿ ನಾಗರಿಕ ಸಮಾಜ ತಲೆತಗ್ಗಿಸುವ ಇಂಥ ಕೃತ್ಯವನ್ನು ಮಾಡುವುದು ಕ್ರೂರವಾದ ಸಂಗತಿ, ವಿದ್ಯಾವಂತ ಜನತೆ ಇಂತಹ ಕೃತ್ಯಕ್ಕೆ ಇಳಿದಿರುವುದು ನೋವಿನ ವಿಚಾರವಾಗಿದೆ, ಸಮಾಜದಲ್ಲಿ ಈಗಾಗಲೇ ಹೆಣ್ಣು ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ, ಇಂತಹ ಮಾನವ ವಿರೋಧಿ ಕೃತ್ಯವನ್ನ ಎಲ್ಲರೂ ತಡೆಯಬೇಕಾಗಿದೆ ಎಂದರು.

ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಉನ್ನತ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆಹಚ್ಚಬೇಕು, ಆರೋಗ್ಯ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸುತ್ತಮುತ್ತಲ ಪ್ರದೇಶದಲ್ಲಿ ಯಾವ್ಯಾವ ಚಟುವಟಿಕೆ ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಬೇಕು, ಸುತ್ತಲು ಬೆಳೆ ಇರುವ ಜಮೀನು ಮಧ್ಯ ಭಾಗದ ಆಲೆಮನೆಯ ಕೊಠಡಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ಬೇರೂರಿದೆ, ಹೆಣ್ಣು ಭ್ರೂಣ ಹತ್ಯೆ ಮಾಡುವುದು ಘೋರ ಅಪರಾಧ. ಕರಾಳ ದಂಧೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮವಾಗಬೇಕು ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!