Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಹೆಚ್.ಆರ್.ಕನ್ನಿಕಾ ಆಯ್ಕೆ

ಮಂಡ್ಯ ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಯುವ ಮಂಡ್ಯ ನಗರ 5ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಹಾಗೂ ಶಿಕ್ಷಕಿ ಡಾ.ಹೆಚ್.ಆರ್.ಕನ್ನಿಕಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಅಶೋಕ್ ಜಯರಾಂ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಿಕಾ ಅವರ ಶೈಕ್ಷಣಿಕ, ಸಾಹಿತ್ಯ, ಸಮಾಜಸೇವಾ ಕಾರ್ಯಗಳನ್ನು ಪರಿಗಣಿಸಿ ಸಮ್ಮೇಳಾನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಅವರು 27 ವರ್ಷಗಳಿಂದ ಕನ್ನಿಕಾ ಶಿಲ್ಪ ನವೋದಯ ತರಬೇತಿ ಕೇಂದ್ರದ ಮೂಲಕ ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡಿದ್ದಾರೆ, ಅಲ್ಲದೆ 7 ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ್ದಾರೆ ಎಂದು ವಿವರಿಸಿದರು.

ಡಾ.ಹೆಚ್.ಆರ್.ಕನ್ನಿಕಾ

ಸಮ್ಮೇಳನವು ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಅಂದು ಬೆಳಿಗ್ಗೆ 9.30ಗಂಟೆ ಮಂಡ್ಯ ರೈತ ಸಭಾಂಗಣದ ಆವರಣದಿಂದ ಸಮ್ಮೇಳಾಧ್ಯಕ್ಷರ ಮೆರವಣಿಗೆ ಪ್ರಾರಂಭವಾಗಲಿದ್ದು, ನಗರಸಭೆ ಪೌರಾಯುಕ್ತ ಆರ್.ಮಂಜುನಾಥ್ ಚಾಲನೆ ನೀಡುವರು ಎಂದರು.

ಬೆಳಿಗ್ಗೆ 10.30 ಗಂಟೆಗೆ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಕೆ.ಗೋಪಾಲಯ್ಯ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಂಪುರ ಆಶಯ ನುಡಿ ನುಡಿಯುವರು. ಸ್ವಾಗತ ಸಮಿತಿ ಅಧ್ಯಕ್ಷ ಅಶೋಕ್ ಜಯರಾಂ ಅಧ್ಯಕ್ಷತೆ ವಹಿಸುವರು. ನಗರಸಭಾಧ್ಯಕ್ಷ ಹೆಚ್.ಎಸ್.ಮಂಜು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸುವರು ಎಂದರು.

ಹೊಳಲು ಶ್ರೀಧರ್ ಅವರ ‘ಪದ ಸಂಚಯ’ ಪುಸ್ತಕವನ್ನು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಬಿಡುಗಡೆ ಮಾಡುವರು. ಜಿಲ್ಲಾ ವರಿಷ್ಠಾಧಿಕಾರಿ ಎನ್.ಯತೀಶ್ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವರು. ಜಿ.ಪಂ.ಸಿಇಓ ಶಾಂತ ಎಲ್ ಹುಲ್ಮನಿ ಅವರು ಕನ್ನಿಕಾ ಅವರ ‘ಸ್ನೇಹದ ಹಣತೆ’ ಕವನ ಸಂಕಲನ ಬಿಡುಗಡೆ ಮಾಡುವರು. ಡಾ.ಹೆಚ್.ಆರ್.ಕನ್ನಿಕಾ ಸಮ್ಮೇಳನಾಧ್ಯಕ್ಷ ನುಡಿ ನುಡಿಯುವರು ಎಂದರು.

ಮಂಡ್ಯನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಗರ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು.

ಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಆರ್.ಮಂಜು ಮುತ್ತೇಗೆರೆ, ನಗರ ಕಸಾಪ ಅಧ್ಯಕ್ಷೆ ಸಿ.ಜೆ.ಸುಜಾತ ಕೃಷ್ಣ ಹಾಗೂ ಕಸಾಪ ಕೋಶಾಧ್ಯಕ್ಷ ಅಪ್ಪಾಜಪ್ಪ ಹಾಗೂ ಚಂದ್ರಕುಮಾರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ