Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಸೆ.9ರಂದು ರಾಷ್ಟ್ರೀಯ ಲೋಕ ಅದಾಲತ್

ಕೆ.ಆರ್.ಪೇಟೆ ಪಟ್ಟಣದ ಸಿವಿಲ್ ನ್ಯಾಯಾಲಯದ ಸಮುಚ್ಛಯದ ಆವರಣದಲ್ಲಿ ಸೆಪ್ಟೆಂಬರ್ 9ರಂದು ಬೆಳಿಗ್ಗೆ ೧೧ಗಂಟೆಗೆ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಓಂಕಾರಮೂರ್ತಿ ತಿಳಿಸಿದರು.

ಕೆ.ಆರ್.ಪೇಟೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ದಾಖಲಿಸಿಕೊಂಡಿರುವ ಪಿರ್ಯಾಧುದಾರರು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ
ಕೇಸುಗಳು, ಚೆಕ್ ಕೇಸುಗಳು, ಭೂಮಿಗೆ ಸಂಬಂಧಿಸಿದ ಸಣ್ಣ-ಪುಟ್ಟ ಜಗಳ ಹಾಗೂ ಹೊಡೆದಾಟದ ಕ್ರಿಮಿನಲ್ ಕೇಸುಗಳನ್ನು ಬಗೆಹರಿಸಿ ಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.

ಪೀರ್ಯಾದುದಾರರು ಈ ಸುವರ್ಣ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಮಾನಸಿಕ ಒತ್ತಡ ಹಾಗೂ ವ್ಯಾಜ್ಯಗಳಿಂದ ಮುಕ್ತರಾಗಿ ನೆಮ್ಮದಿಯ ಜೀವನವನ್ನು ನಡೆಸಬೇಕು. ರಾಜಿ ಸಂಧಾನದ ಮೂಲಕ ತಮ್ಮ ಕೇಸುಗಳನ್ನು ವಾಪಸ್ ಪಡೆದುಕೊಂಡು ತಮ್ಮ ಅಮೂಲ್ಯವಾದ ಸಮಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ