ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲಿಸಿ ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದ ಸಲಹಾ ಮತ್ತು ಉಸ್ತುವಾರಿ ಸಮಿತಿ (DLAMC) ಸದಸ್ಯರುಗಳನ್ನಾಗಿ ಮಂಡ್ಯ ಜಿಲ್ಲೆಯ ಮೂವರನ್ನು ನೇಮಕ ಮಾಡಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.
ಗಣ್ಯ ವ್ಯಕ್ತಿ ಹಾಗೂ ವಿಶೇಷ ಜ್ಙಾನ ಹೊಂದಿದ ಹಿರಿಯ ನಾಗರೀಕರ ವಿಭಾಗದಿಂದ ಮದ್ದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಪರಿಶಿಷ್ಟ ಜಾತಿ ಮತ್ತು ಪಂಗಡದಿಂದ ಮಂಡ್ಯದ ಆರ್’ಎಪಿಸಿಎಂಎಸ್ ನಿರ್ದೇಶಕ ಚಿಕ್ಕಬಳ್ಳಿ ಗ್ರಾಮದ ಸಿ.ಕೆ.ಪಾಪಯ್ಯ ಹಾಗೂ ಮಹಿಳಾ ವರ್ಗದಿಂದ ಮಂಡ್ಯ ನಗರಸಭೆ ಮಾಜಿ ಸದಸ್ಯೆ ಪದ್ಮಾವತಿ ರವಿ ಅವರನ್ನು ನಾಮ ನಿರ್ದೇಶನ ಮಾಡುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಿಫಾರಸ್ಸು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.




