Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಲೋಕ್ ಶಕ್ತಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಮೌಲ್ಯಾಧಾರಿತ ರಾಜಕಾರಣಿ, ಅಧಿಕಾರ ವಿಕೇಂದ್ರೀಕರಣದ ರೂವಾರಿ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆಯವರು ಸ್ಥಾಪಿಸಿದ ಲೋಕ್ ಶಕ್ತಿ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಬಸವರಾಜ್ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಚಂದ್ರಶೇಖರ್ ವಿ.ಸ್ಥಾವರ ಮಠ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದ ವಿಶ್ವೇಶ್ವರಯ್ಯ ಸ್ಮಾರಕದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ನಮ್ಮ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರುಗಳೊಂದಿಗೆ ಸೇರಿ ಬೆಳಿಗ್ಗೆ 10.30 ಗಂಟೆಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷ ಮಂಡ್ಯ ಲೋಕಸಭಾ ಅಭ್ಯರ್ಥಿ ಎನ್.ಬಸವರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!