Friday, September 20, 2024

ಪ್ರಾಯೋಗಿಕ ಆವೃತ್ತಿ

ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಪ್ರಕರಣ ಇತ್ಯರ್ಥ

ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಫೆ.6ರಂದು ಮಂಡ್ಯದ ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದ ಲೋಕ ಅದಾಲತ್ ನಲ್ಲಿ  ಬ್ಯಾಂಕಿಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಪ್ರಕರಣಗಳನ್ನು ಒಂದೇ ದಿನದಲ್ಲೇ ಇತ್ಯರ್ಥ ಪಡಿಸಲಾಯಿತು.

ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳು ಸಲ್ಲಿಸಿರುವ ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ ಗಳನ್ನು ಫೆ.6ರಿಂದ 11ರವರೆಗೆ ವಿಶೇಷ ಪೀಠಗಳಲ್ಲಿ ನಡೆಸಲಾಗುತ್ತಿದೆ.

ರಾಜ್ಯ ಸರ್ಕಾರವನ್ನು ಟ್ರಾಫಿಕ್ ದಂಡವನ್ನು ಲೋಕ ಅದಾಲತ್ ನಲ್ಲಿ ಪಾವತಿ ಮಾಡುವವರಿಗೆ ವಿನಾಯಿತಿ ನೀಡುವಂತೆ ಕೋರಿಕೊಂಡಿದ್ದು, ಫೆಬ್ರವರಿ 11 ರ ಮೊದಲು ಟ್ರಾಫಿಕ್ ದಂಡವನ್ನು ಪಾವತಿಸುವವರಿಗೆ 50% ರಿಯಾಯಿತಿ ನೀಡುವುದಾಗಿ ಸಾರಿಗೆ ಇಲಾಖೆ ಆದೇಶವನ್ನು ಹೊರಡಿಸಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ.

ನ್ಯಾಯಾಲಯದಲ್ಲಿ ದಾಖಲಾಗಿರುವ ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಮೋಟಾರು ವಾಹನಗಳ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳು ಮತ್ತು ಚೆಕ್ ಬೌನ್ಸ್ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳನ್ನು ಲೋಕ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ. ಜನಸಾಮಾನ್ಯರು ಲೋಕ ಅದಾಲತ್‍ನ ಪಡೆದುಕೊಂಡು, ಲೋಕ ಅದಾಲತ್‍ನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!