Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ರೈತನಿಂದ ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್

ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ಸೆಸ್ಕ್ ಸಹಾಯಕ ಇಂಜಿನಿಯರ್ ಕೃಷಿ ಪಂಪ್ ಸೆಟ್ ಗಾಗಿ ವಿದ್ಯುತ್ ಪರಿವರ್ತಕ ಅಳವಡಿಸುವ ಸಂಬಂಧ ರೈತನೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಲಗೂರು ಹೋಬಳಿಯ ಸಹಾಯಕ ಎಂಜಿನಿಯರ್ ಚಂದ್ರಶೇಖರ್ ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದವರು.

ಲಿಂಗಪಟ್ಟಣ ಗ್ರಾಮದ ಪುಟ್ಟಸ್ವಾಮಿ ಅವರು ಜಮೀನಿಗೆ ವಿದ್ಯುತ್ ಪರಿವರ್ತಕ ಅಳವಡಿಸಲು ಕೋರಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರೈತ ಪುಟ್ಟಸ್ವಾಮಿ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು, ಅದರಂತೆ ಲೋಕಾಯುಕ್ತ ಅಧಿಕಾರಿ ಬ್ಯಾಟರಾಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ರೈತನಿಂದ ₹4,500 ಹಣ ಸ್ವೀಕರಿಸುತ್ತಿದ್ದ ವೇಳೆ ಎಂಜಿನಿಯರ್ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ