Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಇಬ್ಬರು ಇಂಜಿನಿಯರ್ ಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರಿನ ಕೊಳಗೇರಿ ಅಭಿವೃದ್ದಿ ಮಂಡಳಿ (ಸ್ಲಂ ಬೋರ್ಡ್)ಯಲ್ಲಿ ಇಂಜಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲರಾಜು ಅವರ ಫಾರ್ಮ್ ಹೌಸ್ ಮೇಲೆ ಸೋಮವಾರ ಲೋಕಯುಕ್ತ ದಾಳಿ ನಡೆದಿದೆ.

ಮಳವಳ್ಳಿ ತಾಲೂಕಿನ ನಂಜೇಗೌಡನ ದೊಡ್ಡಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ದಿಢೀರ್ ದಾಳಿ ನಡೆಸಿದದ ಅಧಿಕಾರಿಗಳು ಹಲವು ಮಾಹಿತಿಗಳನ್ನು ಕಲೆ ಹಾಕಿ, ಪರಿಶೀಲನೆ ನಡೆಸುತ್ತಿದ್ದಾರೆ.

ಮೈಸೂರಿನ ಲೋಕಾಯುಕ್ತ ಅಧಿಕಾರಿ ಸುಚಿತ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹಲವು ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ಇಂಜಿನಿಯರ್ ಶಶಿಕುಮಾರ್ ಮನೆ ಮೇಲೂ  ದಾಳಿ

nudikarnataka.com

ಬೆಂಗಳೂರು ನಗರ ಅಭಿವೃದ್ದಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ