Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕಾಯುಕ್ತ ವರದಿ ನಂತರ ಮಾಡಾಲ್ ವಿರುದ್ಧ ಕ್ರಮ : ಕಟೀಲ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಚನ್ನಗಿರಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮದ್ದೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿರುವ ಯಾರನ್ನು ರಕ್ಷಣೆ ಮಾಡುವುದಿಲ್ಲ, ಲೋಕಾಯುಕ್ತ ವರದಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ವೇಗ ಪಡೆದುಕೊಂಡಿವೆ. 60 ವ‍ರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ಕಡೆಗೆ ಗಮನ ನೀಡಲಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್, ಮುಖಂಡ ಎಸ್ ಪಿ ಸ್ವಾಮಿ, ಟಿ ಎ ಪಿ ಎಂ ಎಸ್ ಅಧ್ಯಕ್ಷ ಮಹದೇವು, ರಘು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!