Friday, September 20, 2024

ಪ್ರಾಯೋಗಿಕ ಆವೃತ್ತಿ

ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿಗೆ ಲೋಕೇಶ್ ಬೆಕ್ಕಳಲೆ ಆಯ್ಕೆ

ಮಂಡ್ಯ ತಾಲ್ಲೂಕಿನ ಬಸರಾಳುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಹಾಗೂ ಲೇಖಕರೂ ಆದ ಲೋಕೇಶ್ ಬೆಕ್ಕಳಲೆ ಅವರು ಮೈಸೂರಿನ ಅದಮ್ಯ ರಂಗಶಾಲೆಯ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ‘ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.
ಮೂಲತಃ ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮದ ಲೋಕೇಶ್ ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು, ಕನ್ನಡ ಉಪನ್ಯಾಸಕರಾಗಿ ಕಾರ್ಯನಿವರ್ಹಿಸುತ್ತಿದ್ದಾರೆ. ಜೊತೆಗೆ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ವೇದಿಕೆಯ ಕ್ರಿಯಾಶೀಲ ಅಧ್ಯಕ್ಷರಾಗಿ ತೊಡಗಿಸಿಕೊಂಡಿದ್ದಾರೆ. ಗದ್ಯ ಪ್ರಕಾರದ ಲೇಖಕರಾಗಿ ಸಾಹಿತ್ಯ, ಕಲೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಮಾರು ೨೫ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ನ. ೧೮ ರಂದು ಸಂಜೆ ೫-೩೦ ಗಂಟೆಗೆ  ಮೈಸೂರಿನ ಜಯಲಕ್ಷ್ಮಿಪುರಂನ ಶ್ರೀ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಮಕ್ಕಳ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಪಂಪ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಅವರು ಲೋಕೇಶ ಬೆಕ್ಕಳಲೆಗೆ ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!