Friday, November 20, 2026

ಪ್ರಾಯೋಗಿಕ ಆವೃತ್ತಿ

ಇನ್ಮುಂದೆ ಸರ್ಕಾರದಿಂದಲೇ ಭಗವಾನ್ ಬುದ್ದ ಜಯಂತಿ ಆಚರಣೆ

ಪ್ರಸ್ತಕ್ತ ವರ್ಷದಿಂದ ರಾಜ್ಯ ಸರ್ಕಾರದಿಂದಲೇ ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದ್ದು, ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025-26 ಅನುದಾನದಿಂದ ಭರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಆದೇಶಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ