Saturday, July 13, 2024

ಪ್ರಾಯೋಗಿಕ ಆವೃತ್ತಿ

ಮದ್ದೂರಿನಲ್ಲಿ ಲಾರಿ ಪಲ್ಟಿ

ಮಾವಿನ ಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಮಾವಿನಕಾಯಿಗಳನ್ನು ತುಂಬಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಹೋಗುತ್ತಿದ್ದ ಲಾರಿ ಬೆಳಿಗ್ಗೆ 7.30 ರ ಸಮಯದಲ್ಲಿ ಮದ್ದೂರು ಪಟ್ಟಣದ ಪುರಸಭೆ ಕಛೇರಿ ಬರುತ್ತಿದ್ದಂತೆ ಪಲ್ಟಿಯಾಗಿದೆ.

ಕಾರ್ ಹಿಂದಿಕ್ಕುವ ಭರದಲ್ಲಿ ಲಾರಿ ನಿಯಂತ್ರಣ ತಪ್ಪಿ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಗೆ ಮಗುಚಿಕೊಂಡಿದ್ದು, ಲಾರಿಯಲ್ಲಿದ್ದ ಮಾವಿನಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನು ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!