Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಂ.ಸಿ.ಲಂಕೇಶ್ ಗೆ ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ  ಎಂ.ಸಿ.ಲಂಕೇಶ್ ಮಂಗಲ ಅವರಿಗೆ ದಶಮುಖ ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ, ವಿದ್ಯಾ ವಾಚಸ್ಪತಿ ಡಾ.ಸಂತೋಷ್ ಭಾರತಿ ಶ್ರೀಪಾದ್ ಹಾಗೂ ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಬೊಮ್ಮೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.

ಲಂಕೇಶ್ ಅವರು ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ ನೂರಾರು ರಕ್ತದಾನ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿರುವುದಲ್ಲದೇ, ವೈಯಕ್ತಿಕವಾಗಿ 61 ಭಾರಿ ರಕ್ತದಾನ ಮಾಡಿ ನೊಂದವರಿಗೆ ನೆರವಾಗಿದ್ದಾರೆ. ಲಂಕೇಶ್ ಅವರು  ನೆಲದನಿ ಸಂಘಟನೆಯ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!