ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಜಯರಾಮು ಅವರನ್ನು ರಾಜ್ಯ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಷಡಕ್ಷರಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಶಂಭುಗೌಡರವರು ನೇಮಕ ಮಾಡಿದ್ದಾರೆ.
ಜಯರಾಮು ಅವರು ಪ್ರಸ್ತುತ ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾಂಡವಪುರ ನೌಕರ ಸಂಘದ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ತಾಲೂಕು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಶಿಕ್ಷಕರ ಸಮಸ್ಯೆಗಳಿಗಾಗಿ ಹೋರಾಟ ನಡೆಸಿದ್ದರು.
ಇವರ ಸಂಘಟನಾ ಚಾತುರ್ಯವನ್ನು ಮನಗಂಡು ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ.
ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ
ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡ, ಕಾರ್ಯದರ್ಶಿ ಗಿರಿಗೌಡ, ಗೌರವಾಧ್ಯಕ್ಷ ಬಸವರಾಜ್, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಅಖಿಲ ಕರ್ನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಪಾಂಡವಪುರ ತಾಲೂಕು ನೌಕರ ಬಂಧುಗಳು ಹಾಗೂ ಶಿಕ್ಷಕರು ಹಾಜರಿದ್ದು ಶುಭ ಕೋರಿದರು.




