Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮಾ.21ಕ್ಕೆ ಎಂ.ಶಿವಲಿಂಗಯ್ಯ ಸಮಾಜಸೇವಾ ಪ್ರಶಸ್ತಿ ಪ್ರದಾನ

ಕರ್ನಾಟಕ ಸಂಘದ ವತಿಯಿಂದ 8ನೇ ವರ್ಷದ ಎಂ.ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 21ರಂದು ಸಂಜೆ 5.30ಕ್ಕೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಮಾಜಿ ಅಧ್ಯಕ್ಷ ವಿಜಯಲಕ್ಷ್ಮಿ ರಘುನಂದನ್ ವಹಿಸಲಿದ್ದು, ಖ್ಯಾತ ವೈದ್ಯೆ ಡಾ.ಎನ್.ಆರ್.ರಾಜೇಶ್ವರಿ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಓ ಕೆ.ಆರ್.ನಂದಿನಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸುವರು ಎಂದರು.

ರೈತ ನಾಯಕಿ ಕೆ.ಎಸ್.ನಂದಿನಿ ಜಯರಾಂ ಅಭಿನಂದನಾ ನುಡಿಗಳನ್ನಾಡಲಿದ್ದು, ದತ್ತಿ ದಾನಿಗಳಾದ ಎಂ.ಕೆ.ಲಕ್ಷ್ಮಿ ಉಪಸ್ಥಿತರರಿರಲಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ 10 ಸಾವಿರ ರೂ ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಘದ ನಿರ್ದೇಶಕ ನಾಗಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ