Wednesday, July 24, 2024

ಪ್ರಾಯೋಗಿಕ ಆವೃತ್ತಿ

ಮಡವಿನಕೋಡಿ ಗ್ರಾ.ಪಂ : ವಿಶಾಲಾಕ್ಷಿ ಪ್ರಕಾಶ್ ಅವಿರೋಧ ಆಯ್ಕೆ

ಕೆ.ಆರ್.ಪೇಟೆ ತಾಲ್ಲೂಕಿನ ಮಡವಿನಕೋಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ ಬಿಜೆಪಿಯ ವಿಶಾಲಾಕ್ಷಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದು,ಅವರನ್ನು ಕ್ರೀಡಾ ಸಚಿವ ನಾರಾಯಣ ಗೌಡ ಅಭಿನಂದಿಸಿದರು.

ಹಿಂದೆ ಆದ ಒಪ್ಪಂದದಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ವಿಶಾಲಾಕ್ಷಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸತೀಶ್ ಅವರು ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

ಮಡವಿನಕೋಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ವಿಶಾಲಾಕ್ಷಿ ಅವರನ್ನು ಡಾ.ನಾರಾಯಣಗೌಡ ಅಭಿನಂದಿಸಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿ ಜನಪರವಾಗಿ ಕೆಲಸ ಮಾಡುವಂತೆ ಶುಭ ಹಾರೈಸಿದರು.

ವಿಶಾಲಾಕ್ಷಿ ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಮುಖಂಡರಾದ ಶೀಳನೆರೆ ಅಂಬರೀಶ್, ಸಾರಂಗಿ ಮಂಜುನಾಥಗೌಡ, ಮುಖಂಡ ಕೆ.ವಿನೋದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್ ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!