Sunday, March 3, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮುಗಿದಿದೆ

2023ರ ವಿಧಾನ ಸಭಾ ಚುನಾವಣೆಯಲ್ಲಿ ಮದ್ದೂರು ಕ್ಚೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುಚರಣ್ ಆಯ್ಕೆ ಮಾಡಲಾಗಿದೆ ಎಂದು ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ತಿಳಿಸಿದರು.

ಪಟ್ಟಣದ ಸೋಮನಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಲವು ಬಾರಿ ಭೇಟಿ ಮಾಡಿದಾಗ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಎಸ್.ಗುರುಚರಣ್ ನಿಲ್ಲುತ್ತಾರೆ. ನೀವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟಿಸಿ, ಕಾಂಗ್ರೆಸ್ ಪಕ್ಷ ಅಧಿಕಾರ ಬರಲು ಗುರುಚರಣ್ ಅವರಿಗೆ ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.

ಅಲ್ಲದೆ ಮದ್ದೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಸದ ಡಿ.ಕೆ. ಸುರೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ.ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಘಟಿಸಿದ್ದಾರೆ ಎಂದರು.

ಕೆಪಿಸಿಸಿ ಸದಸ್ಯ ಗುರುಚರಣ್ ಮಾತನಾಡಿ. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸತತವಾಗಿ ಶ್ರಮಿಸಿದ್ದೇನೆ. ಈಗ ಹೊಸದಾಗಿ ಬಂದಿರುವವರು, ತಮ್ಮ ಪರಿಚಯಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಅದರ ಅವಶ್ಯಕತೆ ನನಗಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಿಂದ ಸಂಘಟನೆಗಾಗಿ ಯಾವ ಯಾವ ಕಾರ್ಯತಂತ್ರಗಳನ್ನು ಮಾಡಬೇಕು ಎಂಬ ಬಗ್ಗೆ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಅದರಂತೆ ಕ್ಷೇತ್ರವ್ಯಾಪ್ತಿಯಲ್ಲಿ ಸಂಘಟನೆ ಮಾಡಿ 2023ಕ್ಕೆ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಾಗಿದೆ ಎಂದರು.

ಹಿರಿಯ ನಾಗರಿಕರ ಸೇವಾ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕೊಪ್ಪ ಹಾಗೂ ಮದ್ದೂರಿನಲ್ಲಿ ಸನ್ಮಾನಿಸಲಾಗುತ್ತದೆ.

ಬಿಜೆಪಿ ಪಕ್ಷದಲ್ಲಿ ಎಸ್.ಎಂ.ಕೃಷ್ಣ ಅವರನ್ನು ಕಡೆಗಣಿಸಲಾಗಿದ್ದು, ಅವರಿಗೆ ಬೇಸರ ತರಿಸಿದೆ. ಹಾಗಾಗಿ ಅವರು ಬಿಜೆಪಿಗೆ ಶೀಘ್ರ ವಿದಾಯ ಹೇಳಬಹುದು ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ. ಟಿಎಪಿಸಿಎಂಎಸ್ ನಿರ್ದೇಶಕ ಶಂಕರ್ ಲಿಂಗಯ್ಯ. ಕಾಂಗ್ರೆಸ್ ಮುಖಂಡರಾದ ಕೆ.ಟಿ. ರಾಜಣ್ಣ. ಬಿಳಿಯಪ್ಪ.ಸಿದ್ದು. ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!