Thursday, September 19, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ : ಡಿ ಸಿ ತಮ್ಮಣ್ಣ

ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತಿದ್ದೆನೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ಮದ್ದೂರು ತಾಲ್ಲೂಕಿನ ಗುರುದೇವರಹಳ್ಳಿ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ ವಿಶೇಷ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.

ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪಯತ್ನ ಮಾಡುತ್ತಿದ್ದು ಕ್ಷೇತ್ರದ ಜನತೆ ನನ್ನ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಕ್ಷೇತ್ರದ ಶಾಸಕನಾದ ನಂತರ ಸರ್ಕಾರದೊಂದಿಗೆ ಹೋರಾಟ ನಡೆಸಿ ಅಗತ್ಯ ಅನುದಾನ ತರುವ ಮೂಲಕ ಅಭಿವೃದ್ಧಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.

ಕ್ಷೇತ್ರದ ಜನರಿಗೆ ಅಗತ್ಯವಾಗಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹಾಗಲಹಳ್ಳಿ ಚಿಕ್ಕತಿಮ್ಮೇಗೌಡ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಮುಖಂಡರಾದ ಎಚ್.ಎಂ.ಮರಿಮಾದೇಗೌಡ, ಕೆ.ಟಿ.ಸುರೇಶ್, ಗುರುದೇವರಹಳ್ಳಿ ಅರವಿಂದ್, ಸಿದ್ದರಾಜು, ಗುರುದೇವರಹಳ್ಳಿ ಶಶಿಕುಮಾರ್ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!