Saturday, May 18, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು | ಜೆಡಿಎಸ್ ಸೇರಿದ ಗುರುಚರಣ್: ಸೂಕ್ತ ಸ್ಥಾನಮಾನದ ಭರವಸೆ ನೀಡಿದ ಹೆಚ್ಡಿಕೆ

ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪ್ರಭಾವಿ ಕಾಂಗ್ರೆಸ್ ಮುಖಂಡ ಗುರುಚರಣ್ ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ಎಸ್.ಎಂ.ಶಂಕರ್ ಪುತ್ರರಾದ ಗುರುಚರಣ್
ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಉದ್ಯಮಿ ಕದಲೂರು ಉದಯ್ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಗುರುಚರಣ್, ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಸೂಕ್ತ ಸ್ಥಾನಮಾನ ಇಂದು ಬೆಳಿಗ್ಗೆ ಮದ್ದೂರು ತಾಲೂಕಿನ ಸೋಮನಹಳ್ಳಿ ಯಲ್ಲಿರುವ ಎಸ್. ಎಂ. ಕೃಷ್ಣರವರ ನಿವಾಸಕ್ಕೆ ಆಗಮಿಸಿದ ಜೆಡಿಎಸ್ ವರಿಷ್ಠ ಎಚ್.ಡಿ‌. ಕುಮಾರಸ್ವಾಮಿ, ಮದ್ದೂರು ಜೆಡಿಎಸ್ ಅಭ್ಯರ್ಥಿ ಶಾಸಕ ಡಿ.ಸಿ. ತಮ್ಮಣ್ಣ ಅವರನ್ನು ಗುರು ಚರಣ್ ಆತ್ಮೀಯವಾಗಿ ಬರಮಾಡಿಕೊಂಡರು. ಗುರುಚರಣ್ ಅವರೊಂದಿಗೆ ಉಪಹಾರ ಸೇವಿಸಿದ ಕುಮಾರಸ್ವಾಮಿ ಹಾಗೂ ಡಿ.ಸಿ. ತಮ್ಮಣ್ಣ ಪ್ರಸ್ತುತ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದರು.

ನಂತರ ಪತ್ರಿಕಾಗೋಷ್ಟಿ ನಡೆಸಿದ ಮಾತನಾಡಿದ ಎಚ್. ಡಿ‌ ಕುಮಾರಸ್ವಾಮಿ ಅವರು,ಮಾಜಿ ಮುಖ್ಯಮಂತ್ರಿ ಸಹೋದರ ಎಸ್.ಎಂ. ಶಂಕರ್ ರವರ ಪುತ್ರ ಗುರುಚರಣ್ ನಮ್ಮ ಪಕ್ಷಕ್ಕೆ ಬಂದಿರುವುದರಿಂದ ಬಹಳ ಶಕ್ತಿ ಬಂದಂತಾಗಿದೆ. ಮದ್ದೂರು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ಸಾಕಷ್ಟು ಪ್ರಯತ್ನಪಟ್ಟಿದ್ದ ಗುರುಚರಣ್ ರವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ.ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ ಎಸ್.ಎಂ. ಕೃಷ್ಣ ಅವರ ಕುಟುಂಬವನ್ನು ನಿರ್ಲಕ್ಷ್ಯ ಮಾಡಿ ಕಾಂಗ್ರೆಸ್ ಅವಮಾನ ಮಾಡಿದೆ. ಕಾಂಗ್ರೆಸ್ ಪಕ್ಷವನ್ನು ಗುರು ಚರಣ್ ತ್ಯಜಿಸಿ ನಮ್ಮ ಪಕ್ಷಕ್ಕೆ ಬಂದಿರುವುದು ಬಲ ತಂದಿದೆ ಎಂದರು.

ಡಿಸಿ ತಮ್ಮಣ್ಣನವರು ಮತ್ತು ಗುರುಚರಣ್ ರವರು ಬೇರೆ ಬೇರೆ ಪಕ್ಷದಲ್ಲಿದ್ದು ಹೋರಾಟ ಮಾಡಿದರೂ, ಅವರಿಬ್ಬರ ಮಧ್ಯೆ ವೈಯಕ್ತಿಕವಾಗಿ ಉತ್ತಮ ಆತ್ಮೀಯತೆ ಇದೆ. ವಿಧಾನಸಭಾ ಚುನಾವಣೆಯಲ್ಲಿ ಗುರುಚರಣ್ ರವರ ಸಹಕಾರ ತಮ್ಮಣ್ಣ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ನಮ್ಮ ಪಕ್ಷ ಗುರುಚರಣ್ ಅವರ ಭವಿಷ್ಯದ ರಾಜಕೀಯಕ್ಕೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿ ಉತ್ತಮ ಸ್ಥಾನಮಾನ ನೀಡಲಿದೆ. ಎಸ್.ಎಂ. ಕೃಷ್ಣ ಅವರ ಕುಟುಂಬ ಜಿಲ್ಲೆಗೆ, ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದೆ. ಗುರು ಚರಣ್ ಅವರನ್ನು ಗೌರವದಿಂದ ನಮ್ಮ ಪಕ್ಷ ನಡೆಸಿಕೊಂಡು ಭವಿಷ್ಯದಲ್ಲಿ ಸೂಕ್ತ ರಾಜಕೀಯ ಸ್ಥಾನಮಾನ ನೀಡಲು ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಮದ್ದೂರು ಕ್ಷೇತ್ರದಲ್ಲಿ ಡಿ.ಸಿ. ತಮ್ಮಣ್ಣನವರ ಜೊತೆ ಸೇರಿ ಗುರುಚರಣ್ ಅವರು ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ. ಗುರುಚರಣ್ ಅವರ ಅಪಾರ ಬೆಂಬಲಿಗರು ಹಾಗೂ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಜೆಡಿಎಸ್ ಸೇರ್ಪಡೆಯನ್ನು ಸ್ವಾಗತಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಶಾಸಕ ಡಿ.ಸಿ.ತಮ್ಮಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಮ್ಮೇಗೌಡ,ಸಂತೋಷ್ ತಮ್ಮಣ್ಣ ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!