ಜುಲೈ 28 ರಂದು ಸಾಧನ ಸಮಾವೇಶ ಹಮ್ಮಿಕೊಂಡಿರುವ ಸಂಬಂಧ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಡಳಿತ ಮತ್ತು ಮದ್ದೂರು ತಾಲೂಕು ಆಡಳಿತ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದರು.
ಮದ್ದೂರು ಸಮೀಪದ ಸೋಮನಹಳ್ಳಿ ತಿಮ್ಮದಾಸ್ ಹೋಟೆಲ್ ಸಮೀಪ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸ್ಥಳ ಪರಿಶೀಲನೆ ಮಾಡಿದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ಜು.28 ರಂದು ಕಾಂಗ್ರೆಸ್ ಸರ್ಕಾರದ ಸಾಧನೆ ಕುರಿತು ಸಾಧನ ಸಮಾವೇಶ ಹಾಗೂ ತಾಲೂಕಿನಲ್ಲಿ ನಡೆಯಲಿರುವ 1300 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಸಿ.ಎಂ.ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸಲಿದ್ದಾರೆ. ಅವರೊಂದಿಗೆ ಹಲವು ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಸಂಬಂಧ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದೆಂದರು.
ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ 1300 ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ತಾಲೂಕಿನ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಧಿಕಾರಿ ಶಿವಾನಂದ, ತಹಸೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಇದ್ದರು.




