Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ನಾಳೆ ಪೊಲೀಸ್ ಸರ್ಪಗಾವಲಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ

ಮದ್ದೂರು ಪಟ್ಟಣದಲ್ಲಿ ಬುಧವಾರ ನಿಗಧಿಯಾಗಿರುವ ಸಾಮೂಹಿಕ ಗಣಪತಿ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಬಂದೋಬಸ್ತ್ ಗಾಗಿ ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯ ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಿರುವುದಾಗಿ ದಕ್ಷಿಣ ವಲಯ ಐ.ಜಿ.ಪಿ ಡಾ. ಬೋರಲಿಂಗಯ್ಯ ತಿಳಿಸಿದರು.

ಮದ್ದೂರು ಪೋಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.10ರ ಬುಧವಾರ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣಪತಿ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಆಯೋಜನೆಗೊಂಡಿದ್ದು ಈ ಸಂಬಂಧ ಈಗಾಗಲೇ ಅಗತ್ಯ ಭದ್ರತೆಗೆ ಇಲಾಖೆ ವತಿಯಿಂದ ಕ್ರಮ ವಹಿಸಿರುವುದಾಗಿ ವಿವರಿಸಿದರು.

ಕಳೆದ ಎರಡು ದಿನಗಳ ಹಿಂದೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯ ರಾಂರಹೀಮ್ ನಗರದಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ಮೇಲೆ ಕಲ್ಲೆಸೆತ ಪ್ರಕರಣ ಸಂಬಂಧ 22 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿಸಿದರು.

ಬಂಧಿತ 22 ಮಂದಿ ಆರೋಪಿಗಳ ಪೈಕಿ ಎರಡರಿಂದ ಮೂರು ಮಂದಿ ಹೊರಗಿನ ವ್ಯಕ್ತಿಗಳೆಂದು ತಿಳಿದುಬಂದಿದ್ದು, ಈ ಕುರಿತು ಮತ್ತಷ್ಟು ತನಿಖೆಯೊಟ್ಟಿಗೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಬಂಧನಕ್ಕೂ ಕ್ರಮ ವಹಿಸಿರುವುದಾಗಿ ಹೇಳಿದರು.

ಪಟ್ಟಣದಲ್ಲಿ ಕಳೆದ ಮೂರು ದಿನಗಳ ಹಿಂದೆ ಉಂಟಾಗಿದ್ದ ಪ್ರಕ್ಷುಬ್ದ ಪರಿಸ್ಥಿತಿ ತಿಳಿಯಾಗುವ ಹಂತ ತಲುಪಿದ್ದು ಸಾರ್ವಜನಿಕರು ಮತ್ತು ಯಾವುದೇ ಸಮುದಾಯಗಳ ಮುಖಂಡರು ಊಹಾಪೋಹಗಳಿಗೆ ಕಿವಿಗೊಡದಂತೆ ಮತ್ತು ಸುಳ್ಳು ಸುದ್ಧಿ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದರು.

ಈಗಾಗಲೇ ಪಟ್ಟಣ ವ್ಯಾಪ್ತಿಯಲ್ಲಿ ಐದು ಎಸ್.ಪಿ., ನಾಲ್ಕು ಹೆಚ್ಚುವರಿ ಎಸ್.ಪಿ., ಹತ್ತು ಡಿ.ವೈ.ಎಸ್.ಪಿ., ಮೂವತ್ತು ಸಿ.ಪಿ.ಐ., ಮೂವತ್ತೆರಡು ಪಿ.ಎಸ್.ಐ., ಒಳಗೊಂಡಂತೆ ಹದಿನೈದು ಕೆ.ಎಸ್.ಆರ್.ಪಿ ತುಕಡಿ., ಹತ್ತು ದಿಢೀರ್ ಪ್ರಹಾರ ದಳದ ತುಕಡಿಯನ್ನು ಈಗಾಗಲೇ ಸೂಕ್ತ ಮತ್ತು ನಿರ್ಧಿಷ್ಟ ಸ್ಥಳಗಳಲ್ಲಿ ನಿಯೋಜನೆ ಮಾಡಿರುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ