Friday, September 20, 2024

ಪ್ರಾಯೋಗಿಕ ಆವೃತ್ತಿ

ಮಾನವೀಯತೆ ಅಳವಡಿಸಿಕೊಂಡರೆ ಜೀವನ ಸಾರ್ಥಕ – ಮಧು ಬಂಗಾರಪ್ಪ

ಶಾಲಾ ಮಕ್ಕಳಿಗೆ ಓದು ಒಂದೇ ಮುಖ್ಯವಲ್ಲ, ಅದರ ಜೊತೆ ಸಾಂಸ್ಕೃತಿಕ ಚಟುವಟಿಕೆಗಳು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡರೇ ಜೀವನ ಸಾರ್ಥಕವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಂದು ಹೇಳಿದರು.

ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ವಿದ್ಯಾರ್ಥಿಗಳು ಉನ್ನತ ಆದರ್ಶನಗಳನ್ನು ಮೈಗೂಸಿಕೊಳ್ಳಬೇಕು, ನಾವು ಕರೋನಾ ಸಂದರ್ಭದಲ್ಲಿ ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದೇವೆ, ಅಂತಹ ಸಂಕಷ್ಟದ ಸಂದರ್ಭದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬುದನ್ನು ಇಂತಹ ತರಬೇತಿಗಳು ತಿಳಿಸುತ್ತವೆ, ಅವುಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

10,000 ಅತಿಥಿ ಶಿಕ್ಷಕರ ನೇಮಕ

ಇದಕ್ಕೂ ಮೊದಲು ಮಂಡ್ಯ ನಗರದ ಹೊಸಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿಪೂರಕ ಪೋಷಣ ಪೌಷ್ಠಿಕ ಆಹಾರ ಯೋಜನೆಯಡಿ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಣೆಗೆ ಚಾಲನೆ ನೀಡಿದ ಅವರು, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚುವರಿಯಾಗಿ 10,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದೆಂದು  ತಿಳಿಸಿದರು.

30 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿದರೂ ಸಹ ಶಿಕ್ಷಕರ ಕೊರತೆ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ, ಆ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

ಒಂದರಿಂದ 10 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಮೊಟ್ಟೆ ವಿತರಣೆ ಮಾಡಲು ತೀರ್ಮಾನಿಸಿದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ದೊರೆತಿದೆ ಎಂದು ಹೇಳಿದರು.

ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಹೊರಡಿಸಿದ್ದ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿಗೊಳಿಸುವ ಮೂಲಕ ಮಾತು ತಪ್ಪದೇ ಸರ್ಕಾರ ಮುನ್ನೆಡೆದಿದೆ, ಪ್ರಣಾಳಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇರಲಿಲ್ಲ, ಆದರೂ ಸಹ ಯೋಜನೆಯನ್ನು ಜಾರಿಗೊಳಿಸಿರುವುದು ಸರ್ಕಾರಕ್ಕೆ ಗೌರವ ತಂದಿದೆ ಎಂದರು.

ರಾಜ್ಯದಲ್ಲಿ 1.20 ಕೋಟಿ ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಮಸ್ಯೆಗಳಿವೆ, ಶಿಕ್ಷಕರು, ಶಾಲಾ ಕೊಠಡಿ ಕೊರತೆ ಸೇರಿ ಅನೇಕ ಸಮಸ್ಯೆಗಳ ಬಗ್ಗೆ ಚುನಾಯಿತ ಜನಪ್ರತಿನಿಧಿಗಳು ಸಹ ಬೆಳಕು ಚೆಲ್ಲಿದ್ದಾರೆ, ಮುಂದಿನ ದಿನಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು. ಪ್ರತಿಪಕ್ಷಗಳು ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಬೊಬ್ಬೆ ಹಾಕುತ್ತಿವೆ ಆದರೆ ನಮ್ಮ ಇಲಾಖೆಯಲ್ಲಿ ಅಂತಹ ಅವಕಾಶವಿಲ್ಲ, ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ನಡೆದಿದೆ, ಎಲ್ಲವೂ ಪಾರದರ್ಶಕವಾಗಿ, ಮುಕ್ತವಾಗಿ ನಡೆದಿದೆ ಎಂದರು,

ಸಮಾರಂಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ,ಶಾಸಕರಾದ ರವಿಕುಮಾರ್ ಗಣಿಗ,ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಾಬು ಬಂಡಿಸಿದ್ದೇಗೌಡ, ಮಧು ಜಿ ಮಾದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!