ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್.ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.




