Monday, November 23, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಡಿ.29 ಕ್ಕೆ ಮಧು ಜಿ.ಮಾದೇಗೌಡ ಅಭಿನಂದನಾ ಸಮಾರಂಭ

ಭಾರತೀ ಎಜುಕೇಷನ್ ಟ್ರಸ್ಟ್ ಮತ್ತು ಮಹಾತ್ಮಗಾಂಧಿ ಸ್ಮಾರಕ ಟ್ರಸ್ಟ್ ಹಾಗೂ ಮಧು ಮಾದೇಗೌಡ ಅಭಿಮಾನಿಗಳ ಬಳಗದ ಸಂಯುಕ್ತಾಶ್ರಯದಲ್ಲಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಅಭಿನಂದನಾ ಸಮಾರಂಭವನ್ನು ಡಿಸೆಂಬರ್ ೨೯ ರಂದು ಮಧ್ಯಾಹ್ನ ೨.೩೦ಕ್ಕೆ ಮದ್ದೂರು ತಾಲೂಕಿನ ಭಾರತೀನಗರದ ಭಾರತೀ ಎಜುಕೇಷನ್ ಟ್ರಸ್ಟ್ ಆವರಣದ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ ಹಾಗೂ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿಶ್ಚಲಾನಂದನಾಥಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಅಭಿನಂದನಾ ನುಡಿಯುವರು. ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅಭಿನಂದನೆ ಸ್ವೀಕರಿಸುವರು. ಭಾರತೀ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ನಂಜೇಗೌಡ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ನಿವೃತ್ತ ಕಾರ್ಯಪಾಲಕ ಅಭಿಯಂತರ ಬಸವರಾಜೇಗೌಡ ಜಂಟಿ ಸುದ್ದಿಗೋಷ್ಠಿಯಲ್ಲಿ ಅಭಿಮಾನಿ ಬಳಗದ ಯೋಗೇಶ್, ಜಯರಾಂ, ಪ್ರೊ.ರಾಜೇಂದ್ರ, ದೇವೇಗೌಡ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ