Sunday, May 5, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ : ಸ್ಟಾರ್ ಚಂದ್ರು ಪರ ಶಾಸಕ ಮಧು ಮಾದೇಗೌಡ ಕಾರ್ಯಪಡೆ ಪ್ರಚಾರ

ವಿಧಾನ ಪರಿಷತ್ ಸದಸ್ಯ ಮಧುಜಿ.ಮಾದೇಗೌಡ ಕಾರ್ಯಪಡೆ ಸದಸ್ಯರು ಮಂಡ್ಯ ತಾಲ್ಲೂಕಿನ ಹಲವಾರು ಗ್ರಾಮಗಳಿಗೆ ತೆರಳಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತಯಾಚಿಸಿದರು.

ಈ ವೇಳೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಮಾತನಾಡಿ, ಮಂಡ್ಯ ಜಿಲ್ಲೆಗೆ ಕೋಮುವಾದದ ಕಿಚ್ಚನ್ನು ಹಚ್ಚಲು ಬರುತ್ತಿರುವವರನ್ನು ತಡೆಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿರುವ ಪ್ರಸ್ತುತ ಸಂದರ್ಭದಲ್ಲಿ ವಿಧಾನಪರಿಷತ್‌ಸದಸ್ಯ ಮಧುಜಿ ಮಾದೇಗೌಡರ ಕಾರ್ಯಪಡೆ ಸದಸ್ಯರು ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಭಿನ್ನವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸುತ್ತ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುತಿದ್ದಾರೆ ಎಂದರು.

ಹಿಂದಿನ ವಿಧಾನಪರಿಷತ್ ಚುನಾವಣೆಯಲ್ಲಿಯೂ ಮಧು ಜಿ.ಮಾದೇಗೌಡ ಗೆಲವಿಗೆ ಕಾರ್ಯಪಡೆ ರಚಿಸಿ ಕೊಂಡು ವಿಧಾಸಭೆ ಚುನಾವಣೆ ಮಾಧರಿಯಲ್ಲಿ ಮನೆ ಮನೆಗೆ ತೆರಳಿ ಅವರ ಗೆಲಲ್ಲಲು ಶ್ರಮಿಸಿದ್ದು. ಅದೇ ರೀತಿ ಕಾರ್ಯಪಡೆ ಸದಸ್ಯರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮತಯಾಚಿಸುತಿದ್ದಾರೆ ಎಂದರು.

ಮಧು ಜಿ. ಮಾದೇಗೌಡ ಕಾರ್ಯಪಡೆ ಸದಸ್ಯರು ಮನೆಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದಿಂದ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಹಾಗೂ ಮಂಡ್ಯ ಜಿಲ್ಲೆಗೆ ಕೊಟ್ಟಿರುವ ಅನುದಾನದ ಬಗ್ಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗುತ್ತಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ ಮಂಡ್ಯದ ಅಭಿವೃದ್ದಿ ಶೂನ್ಯವಾಗಿದೆ, ಜತೆಗೆ ಸುಳ್ಳಿನ ಸರಮಾಲೆಯಲ್ಲಿಯೇ ದೇಶದ ಜನರನ್ನು ವಂಚಿಸುತ್ತಿರುವ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಿ ಮಂಡ್ಯ ಜಿಲ್ಲೆಯನ್ನು ರಕ್ಷಿಸಬೇಕಿದೆ ಎಂದರು.
ಮAಡ್ಯ ಜಿಲ್ಲೆಯವರೇ ಆದ ಸ್ಟಾರ್ ಚಂದ್ರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರದ ಮತದಾರರು ಗೆಲ್ಲಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರದ ಅಭಿವೃದ್ದಿಗೆ ಕೈಜೋಡಿಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಮತ್ತು ಉಚಿತ ವಿದ್ಯುತ್ ಕೊಡುವ ಯೋಜನೆ ಜಾರಿಗೆ ತರುವುದಾಗಿ ಹೇಳಲಾಗಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕಳೆದ ಹತ್ತು ತಿಂಗಳಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುವುದರ ಜತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಗ್ಯಾರಂಟಿ ಯೋಜನೆ ಬಡ ಜನರಿಗೆ ವರದಾನವಾಗಿ ಪರಿಣಮಿಸಿವೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದು ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಆಗಿವೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಧುಜಿ.ಮಾದೇಗೌಡ ಕಾರ್ಯಪಡೆ ಸದಸ್ಯರು ಅಣ್ಣೂರು ದೇವರಾಜು, ಮುಟ್ಟನಹಳ್ಳಿ ರಾಜಕುಮಾರ್, ದೇವರಹಳ್ಳಿ ನಂದನ್‌ಕುಮಾರ್, ಶೆಟ್ಟಹಳ್ಳಿ ಮನು, ಆಲದಹಳ್ಳಿ ಶಂಕರ್, ಮಧು ಕುಮಾರ್ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!