ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಮಧು ಮಾದೇಗೌಡ ಗೆಲ್ಲುವ ಮುನ್ಸೂಚನೆಯಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮದ್ದೂರಿನ ಶಿವಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ರವರಿಂದ ಅಭಿನಂದನೆ ಸ್ವೀಕರಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಪಟ್ಟರೆ ಮಧು ಮಾದೇಗೌಡ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದರು.
ದಕ್ಷಿಣ ಪದವೀಧರ ಕ್ಷೇತ್ರದ ಮತದಾರರು ಪ್ರಜ್ಞಾವಂತ ರಿದ್ದಾರೆ.ಯಾರನ್ನು ಆಯ್ಕೆ ಮಾಡಬೇಕು. ಯಾರಿಂದ ನಮ್ಮ ಸಮಸ್ಯೆಗಳು ಬಗೆಹರಿಯುತ್ತದೆ ಎಂಬ ವಿಚಾರ ಅವರಿಗೆ ಗೊತ್ತಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಗೆಲ್ಲಿಸುತ್ತಾರೆ ಎಂದರು.
ಈಶ್ವರಪ್ಪ ಅವನೊಬ್ಬ ಕಳ್ಳ. ಅವನ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಗುರುಚರಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಪುರಸಭೆ ಮಾಜಿ ಅಧ್ಯಕ್ಷ ಅಮರ್ ಬಾಬು, ಕಾಂಗ್ರೆಸ್ ಮುಖಂಡರಾದ ಮಹೇಶ್, ಅರುಣ್, ಅವಿನಾಶ್, ಗ್ರಾಮ ಪಂಚಾಯ್ತಿ ಸದಸ್ಯ ಶಿವಣ್ಣ, ಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.