Friday, September 13, 2024

ಪ್ರಾಯೋಗಿಕ ಆವೃತ್ತಿ

ಮಡಿವಾಳ ಸಮಾವೇಶ ಯಶಸ್ವಿಗೆ ಪಿ.ಎಂ.ನರೇಂದ್ರಸ್ವಾಮಿ ಮನವಿ

ಮೇ.22ರಂದು ತುಮಕೂರಿನಲ್ಲಿ ನಡೆಯುವ ಮಡಿವಾಳ ಸಮುದಾಯದ ರಾಜ್ಯಮಟ್ಟದ ಸಮಾವೇಶ ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಮನವಿ ಮಾಡಿದರು.

ಮಂಡ್ಯದ ಪ್ರವಾಸಿ ಮಂದಿರದಲ್ಲಿ ಮಡಿವಾಳ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಶೋಷಿತ ವರ್ಗಗಳ ಸಮುದಾಯದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಬೆಂಬಲಿಸಿ ನಡೆಯುತ್ತಿರುವ ಮಡಿವಾಳ ಸಮಾಜದ ಸಮಾವೇಶ ನಡೆಯುತ್ತಿದ್ದು ಅತಿ ಹೆಚ್ಚು ಜನರು ಭಾಗವಹಿಸುವ ಮೂಲಕ ಒಗ್ಗಟ್ಟಿನ ಪ್ರದರ್ಶನ ಮಾಡಬೇಕು. ಕಾಂಗ್ರೆಸ್ ಪಕ್ಷ ಮಾತ್ರ ಶೋಷಿತ ಸಮುದಾಯಗಳ ಕೈ ಹಿಡಿಯಲು ಸಾಧ್ಯ ಎಂಬುದನ್ನು ನಿಮ್ಮ ಸಮಾಜದ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ರಾಜ್ಯದಲ್ಲಿ ಎರಡು ಪಕ್ಷಗಳು ಮಡಿವಾಳ ಸಮಾಜದ ಹಿತ ಕಾಯುವಲ್ಲಿ ವಿಫಲವಾಗಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶೋಷಿತ ವರ್ಗಗಳು ಒಂದುಗೂಡಬೇಕು.ಆ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಮಡಿವಾಳ ಸಮುದಾಯದ ಮುಖಂಡ ಅಮರನಾಥ್ ಮಾತನಾಡಿ, ಪರಿಶಿಷ್ಟ ಜಾತಿಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕೆಂದು ಆಗ್ರಹಿಸಿ ಸಮಾವೇಶ ನಡೆಯುತ್ತಿದ್ದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ನಮ್ಮ ಸಮಾಜದ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಮಂಡ್ಯ ಜಿಲ್ಲೆಯಿಂದ ಕನಿಷ್ಠ 8 ರಿಂದ 10 ಸಾವಿರ ಜನರನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಚಿನಕುರುಳಿ ರಮೇಶ್, ರವಿ, ಗೊರವಾಲೆ ಚಂದ್ರು ಸೇರಿದಂತೆ ಹಲವರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!