Thursday, September 19, 2024

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ರಾಜ್ಯ ಮಾತಂಗಿ ಮಾದಿಗ ಸಮಾಜ ಪರಿವರ್ತನಾ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಾಜ್ಯ ಮಾತಂಗಿ ಮಾದಿಗ ಸಮಾಜ ಪರಿವರ್ತನಾ ವೇದಿಕೆಯ ಮಂಡ್ಯ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಯಿತು.

ವೇದಿಕೆಯ ರಾಜ್ಯ ಸಮಿತಿ ಸದಸ್ಯರಾದ ರಾಯಸಮುದ್ರ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಮಾತಂಗಿ ಮಾದಿಗ ಸಮಾಜ ಪರಿವರ್ತನಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಹೊಸಹೊಳಲು ಕುಮಾರ್ ಅವರನ್ನು ರಾಜ್ಯ ಸಮಿತಿಯ ಅಧ್ಯಕ್ಷರಾದ ಪ್ರಭು.ಎಸ್.ಹಿತ್ತಲಮನಿ ಅವರ ಆದೇಶದ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅದೇ ರೀತಿ ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆಲೇನಹಳ್ಳಿ ಚೆಲುವರಾಜು ಅವರನ್ನು ಹಾಗೂ ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಬೋಗಾದಿ ಮಂಜಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮಂಡ್ಯ ಜಿಲ್ಲಾಧ್ಯಕ್ಷ ಹೊಸಹೊಳಲು ಕುಮಾರ್ ಮಾತನಾಡಿ,ನಮ್ಮ ಮಾದಿಗ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ. ಅಧಿಕಾರಿಗಳು ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಇದರಿಂದ ನಮ್ಮ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ. ದಲಿತ ಸಮುದಾಯದಲ್ಲಿಯೇ ಅತ್ಯಂತ ಹೆಚ್ಚು ಹಿಂದುಳಿದ ಸಮುದಾಯವಾಗಿರುವ ಕಾರಣ ನಮ್ಮ ಮಾದಿಗ ಸಮುದಾಯವನ್ನು ಸಂಘಟಿಸಿ, ಜನ ಜಾಗೃತಗೊಳಿಸುವ ಕೆಲಸವನ್ನು ನಮ್ಮ ವೇದಿಕೆಯು ರಾಜ್ಯಾದ್ಯಂತ ಮಾಡುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲಿ ನಮ್ಮ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಸಮುದಾಯದ ಬಂಧುಗಳನ್ನು ಪ್ರತಿಯೊಂದು ಗ್ರಾಮಗಳಲ್ಲಿ ಸಂಘಟನೆ ಮಾಡಿ ಸಮುದಾಯದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ವೇದಿಕೆಯ ತಾಲ್ಲೂಕು ಘಟಕದ ಸಂಘಟನಾ ಕಾರ್ಯದರ್ಶಿ ಹೊಸಹೊಳಲು ವಿಷ್ಣುರಾಜು, ಜಿಲ್ಲಾ ಸಮಿತಿ ಸದಸ್ಯರಾಗಿ ಪಿ.ಬಿ.ಮಂಚನಹಳ್ಳಿ ರವಿ, ಮಹೇಶ್, ಮಾಂಬಹಳ್ಳಿ ಜಯರಾಂ, ರಾಯಸಮುದ್ರ ಗ್ರಾಮ ಘಟಕದ ಅಧ್ಯಕ್ಷ ಜಯಣ್ಣ, ಗೌರವಾಧ್ಯಕ್ಷ ದೇವರಾಜು, ಉಪಾಧ್ಯಕ್ಷ ಸುರೇಶ್, ಸ್ವಾಮಿ, ಶಂಕರ್, ಶಿವಲಿಂಗಯ್ಯ, ನಾಗರಾಜು, ನಾಗಮಂಗಲ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಗುರು, ಪ್ರಧಾನ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಮಹೇಶ್, ಕಾರ್ಯದರ್ಶಿ ರಾಕೇಶ್, ಖಜಾಂಚಿ ಸ್ವಾಮಿ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಮಾತಂಗಿ ಮಾದಿಗ ಸಮಾಜ ಪರಿವರ್ತನಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷ ಹೊಸಹೊಳಲು ಕುಮಾರ್ ಅವರು ನಮ್ಮ ಮಾದಿಗ ಸಮುದಾಯಕ್ಕೆ ಸಂವಿಧಾನ ಬದ್ದವಾಗಿ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ. ಅಧಿಕಾರಿಗಳು ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಇದರಿಂದ ನಮ್ಮ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ. ದಲಿತ ಸಮುದಾಯದಲ್ಲಿಯೇ ಅತ್ಯಂತ ಹೆಚ್ಚು ಹಿಂದುಳಿದ ಸಮುದಾಯವಾಗಿರುವ ಕಾರಣ ನಮ್ಮ ಮಾದಿಗ ಸಮುದಾಯವನ್ನು ಸಂಘಟಿಸಿ, ಜನ ಜಾಗೃತಗೊಳಿಸುವ ಕೆಲಸವನ್ನು ನಮ್ಮ ವೇದಿಕೆಯು ರಾಜ್ಯಾದ್ಯಂತ ಮಾಡುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲಿ ನಮ್ಮ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಸಮುದಾಯದ ಬಂಧುಗಳನ್ನು ಪ್ರತಿಯೊಂದು ಗ್ರಾಮಗಳಲ್ಲಿ ಸಂಘಟನೆ ಮಾಡಿ ಸಮುದಾಯದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಹೊಸಹೊಳಲು ಕುಮಾರ್ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!