Friday, November 20, 2026

ಪ್ರಾಯೋಗಿಕ ಆವೃತ್ತಿ

Breaking News | ಮಹೇಶ್ ತಿಮರೋಡಿಗೆ ಷರತ್ತುಬದ್ದ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮೂರು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ತಿಮರೋಡಿ ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ತಿಮರೋಡಿ ಪರವಾಗಿ ವಕೀಲ ವಿಜಯ್ ವಾಸು ಪೂಜಾರಿ ವಾದ ಮಂಡಿಸಿದ್ದರು. ಸಹಾಯಕ ಸರ್ಕಾರಿ ವಕೀಲೆ ಮೋಹಿನಿ ಆಕ್ಷೇಪಣೆ ಸಲ್ಲಿಸಿದ್ದರು.

ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸರು ಉಜಿರೆಗೆ ತೆರಳಿ ನಿವಾಸದಿಂದ ತಿಮರೋಡಿಯನ್ನು ಮೊನ್ನೆಯಷ್ಟೇ ಬಂಧಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ