Saturday, July 13, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಮೈ.ವಿ.ರವಿಶಂಕರ್ ಪತ್ನಿ ಮತಯಾಚನೆ

ಮಂಡ್ಯ ನಗರದ ವಿವಿಧೆಡೆ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರವಾಗಿ ಅವರ ಪತ್ನಿ ಪೂರ್ಣಿಮಾ ರವಿಶಂಕರ್ ಮತಯಾಚಿಸಿದರು.

ನನ್ನ ಪತಿ ರವಿಶಂಕರ್ ಅವರು ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದು, ಈ ಬಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಬೇಕೆಂದು ಪದವೀಧರ ಮತದಾರರನ್ನು ಕೋರಿದರು.

ಜಿಲ್ಲೆಯಲ್ಲಿ ಪದವೀಧರ ಮತದಾರರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿರುವುದು ರವಿಶಂಕರ್ ಅವರಿಗೆ ಗೊತ್ತಿದೆ. ಅವರನ್ನು ಆಯ್ಕೆ ಮಾಡಿದರೆ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ.ತಾವು ದಯಮಾಡಿ ಅವರಿಗೆ ಒಂದು ಬಾರಿ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮನ್ ಮುಲ್ ನಿರ್ದೇಶಕಿ ಸುಜಾತ ಕೃಷ್ಣ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಅನುರಾಧ ರಘು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಶೋಧಮ್ಮ, ಪುಟ್ಟಮ್ಮ, ಶಿವಮ್ಮ, ಸುಧಾರಾಣಿ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!