Tuesday, November 24, 2026

ಪ್ರಾಯೋಗಿಕ ಆವೃತ್ತಿ

ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕ್ರಮ ಸರಿಯಲ್ಲ ; ಕೃಷ್ಣಮೂರ್ತಿ

ಮಳವಳ್ಳಿ ತಾಲೂಕಿನ ಧನಗೂರಿನ ಸರಕಾರಿ ಗೋಮಾಳದಲ್ಲಿ 3-4 ದಶಕಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಪರಿಶಿಷ್ಠ ಜಾತಿ/ಪಂಗಡದ ರೈತರನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಖಂಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಗ್ರಾಮದ ಸರ್ವೆ ನಂ 277 ಹಾಗೂ 299ರಲ್ಲಿ ಪರಿಶಿಷ್ಟ ಜಾತಿ, ಪಂಗಡದ ಸಮುದಾಯದವರು ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದರು, ಈಗಾಗಲೇ ನಮೂನೆ 50, 53 ಮತ್ತು 57ರಲ್ಲಿ ಅನುಭವದಲ್ಲಿರುವಂತೆ ಹಕ್ಕುಪತ್ರ ವಿತರಿಸಲು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಮಳವಳ್ಳಿ ತಾಲೂಕಿನಲ್ಲಿ ಅಕ್ರಮವಾಗಿ ಸಾವಿರಾರು ಎಕರೆ ಖಾತೆ ಮಾಡಿಕೊಂಡಿರುವ ಹಿನ್ನಲೆ ಎಸ್‌ಐಟಿ ತಂಡ ರಚಿಸಿ ತನಿಖೆ ಮಾಡಲಾಗುತ್ತಿದ್ದು. ತಂಡವು 23 ಮಂದಿ ಅನಧಿಕೃತವಾಗಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ಸರಕಾರಕ್ಕೆ ವರದಿ ಸಲ್ಲಿಸಿದೆ. ಸರಕಾರವೂ ಆ 23 ಮಂದಿ ಅಕ್ರಮ ಖಾತೆ ತೆರವು ಗೊಳಿಸಿ, ಸೂಕ್ತ ಕ್ರಮ ಜರುಗಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದೆ. ಆದರೆ ಅವರು ಅಕ್ರಮ ಖಾತೆ ಮಾಡಿಕೊಂಡಿರುವವರನ್ನು ಬಿಟ್ಟು, ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಈ 23 ಮಂದಿ ನಮ್ಮ ಹೆಸರಿಗೆ 60 ರಿಂದ 160 ಎಕರೆವರೆಗೂ ಭೂಮಿ ಅಕ್ರಮ ಖಾತೆ ಮಾಡಿಸಿಕೊಂಡಿದ್ದಾರೆ. ಮಳವಳ್ಳಿ ತಾಲೂಕಿನ ಸ್ಥಳೀಯರೇ ಅಲ್ಲದ ಇವರು ಬೆಂಗಳೂರು, ಮಂಡ್ಯ ತಾಲೂಕು ಹಾಗೂ ಗೆಜ್ಜಲಗೆರೆ ಭಾಗದವರಾಗಿದ್ದಾರೆ. ಇವರುಗಳ ವಿರುದ್ಧ ಕ್ರಮ ಕೈಗೊಳ್ಳದೆ ಬಗರ್ ಹುಕುಂ ಸಾಗುವಳಿದಾರರ ಜಮೀನಿನಲ್ಲಿ ಸೂಚನಾ ಫಲಕ ಅಳವಡಿಸಿ ಶೋಷಣೆ ನಡೆಸುತ್ತಿದ್ದಾರೆ ಎಂದು ದೂರಿದರು.

ಕೂಡಲೇ ಅಕ್ರಮ ಖಾತೆ ಮಾಡಿಸಿಕೊಂಡಿರುವುದನ್ನು ರದ್ದುಪಡಿಸಬೇಕು, ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ಷೇತ್ರದ ಶಾಸಕರೇ ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದು, ಸಾಗುವಳಿ ಮಾಡುವ ರೈತರ ರಕ್ಷಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಶಿವಶಂಕರ್, ಮಳವಳ್ಳಿ ತಾಲೂಕು ಅಧ್ಯಕ್ಷ ನಂಜುAಡಸ್ವಾಮಿ, ರೈತರಾದ ಶಿವಣ್ಣ, ಆರ್.ಗೋವಿಂದರಾಜು, ಮಹದೇವ, ವೆಂಕಟರಾಮು, ಶಿವು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ