Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ| ಸುಪ್ರೀಂ ತೀರ್ಪು ಖಂಡಿಸಿ ಸೆ.26ರಂದು ಮಳವಳ್ಳಿ ಬಂದ್

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಸೆ. 26ರಂದು ಮಳವಳ್ಳಿ ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘ ಸಂಸ್ಥೆಗಳು ಹಾಗೂ ವತ೯ಕರು ಸಹಕರಿಸಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಲ್ಲಿನ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೂ ತೊಂದರೆ ಅನುಭವಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತೊರುವುದು ಖಂಡನೀಯ. ರಾಜ್ಯದ ಜನರು ಒಕ್ಕೋರಳಿನ ಹೋರಾಟದೊಂದಿಗೆ ಕಾವೇರಿಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದಾಗಿದ್ದು, ಕಾವೇರಿ ಹೋರಾಟದ ಬಂದ್ ಗೆ ಪಕ್ಷಾತೀತವಾಗಿ ಪ್ರತಿಯೊಬ್ಬರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಗೋಷ್ಠಿಯಲ್ಲಿ ಪುರಸಭೆ ಸದಸ್ಯರಾದ ನೂರುಲ್ಲ, ಪ್ರಶಾಂತ್, ನಾಗೇಶ್, ಮುಖಂಡರಾದ ಪುಟ್ಟಬುದ್ಧಿ, ಕೆಂಪಯ್ಯ, ಮಲ್ಲೇಗೌಡ, ನಾಗೇಶ್, ವೇಣು, ಮಹೇಶ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!