Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ: ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ

ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ಸಹಾಯವಾಗುವಂತೆ ಸರ್ಕಾರದ ವತಿಯಿಂದ ಹೊಲಿಗೆ ಯಂತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಿ ಮಾತನಾಡಿದ ಅವರು,ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ಸಹಾಯವಾಗುವಂತೆ ಸರ್ಕಾರದ ವತಿಯಿಂದ ಹೊಲಿಗೆ ಯಂತ್ರಗಳನ್ನು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ವಿತರಣೆ ಮಾಡಲಾಗುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸದೃಢರಾಗಿ ಸ್ವಾಭಿಮಾನದಿಂದ ಬದುಕಬೇಕೆಂದು ಕರೆ ನೀಡಿದರು.

ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ದುಡಿದ ಹಣದಲ್ಲಿ ಸ್ವಲ್ಪ ಭಾಗದಷ್ಟು ಉಳಿತಾಯ ಮಾಡಿ ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಭರವಸೆ ಕೊಟ್ಟಂತೆ ಎಲ್ಲಾ ಯೋಜನೆಗಳನ್ನು ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಅನುಷ್ಠಾನ ಗೊಳಿಸುತ್ತಿದ್ದು, ಸಂಕಷ್ಟದಲ್ಲಿ ಕೈಹಿಡಿದಿರುವ ಕಾಂಗ್ರೆಸ್ ಪಕ್ಷದ ರಕ್ಷಣೆಗೆ ಮಹಿಳೆಯರು ನಿಲ್ಲಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬೋರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್‌.ಎನ್. ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಬಂಕ್ ಮಹದೇವು, ಜಗದೀಶ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ