Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ರೌಡಿಗಳ ಹಾವಳಿ ನಿಗ್ರಹಕ್ಕೆ ಶಾಸಕ ನರೇಂದ್ರಸ್ವಾಮಿ ಸೂಚನೆ

ಮಳವಳ್ಳಿ ಪಟ್ಟಣ ಸೇರಿದಂತೆ ಕೆಲವಡೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಒತ್ತಡಕ್ಕೆ ಒಳಗಾಗದೇ ಅಂತಹ ವ್ಯಕ್ತಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ಪಿ. ಎಂ. ನರೇಂದ್ರಸ್ವಾಮಿ ಡಿವೈಎಸ್‌ಪಿ ಅವರಿಗೆ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟದಿಂದಾಗಿ ಹಲವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು, ಅಲ್ಲದೇ ಪಟ್ಟಣ ಸೇರಿದಂತೆ ಕೆಲವಡೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಒತ್ತಡಕ್ಕೆ ಒಳಗಾಗದೇ ಅಂತಹ ವ್ಯಕ್ತಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಿವೈಎಸ್‌ಪಿ ಅವರಿಗೆ ಸೂಚನೆ ನೀಡಿದರು.

ಶಿಕ್ಷಣ ಇಲಾಖೆಯೂ ಪರೀಕ್ಷೆ ಸಮಯವಾಗಿರುವುದರಿಂದ ಮಕ್ಕಳ ಆರೋಗ್ಯದ ಜೊತೆಗೆ ಭವಿಷತ್ ಜೊತೆಗೆ ಎಚ್ಚರಿಕೆ ವಹಿಸಬೇಕು. ಶಿಕ್ಷಣ ಇಲಾಖೆಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿರುವುದರಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಮಕ್ಕಳನ್ನು ಅಣಿಗೊಳಿಸಬೇಕೆಂದು ತಿಳಿಸಿದರು.

ಪಟ್ಟಣದ ಮಾರೇಹಳ್ಳಿ ಬಳಿ ನಿರ್ಮಾಣಮಾಡುತ್ತಿರುವ ಹೊಸ ಬಡಾವಣೆಯೂ ನಿಯಮಬಾಹಿರ ಹಾಗೂ ಅಕ್ರಮವಾಗಿದೆ, ಅದರ ನಾಕಾಶೆಯೇ ಅನುಮೋದನೆಯಾಗಿಲ್ಲ, ಸರ್ಕಾರ ಹಾಗೂ ಸಂಬAಧಪಟ್ಟ ಇಲಾಖೆ ಅನುಮೋದನೆ ಇಲ್ಲದೇ ಬಡಾವಣೆ ಅಭಿವೃದ್ದಿಗೆ ವಿವಿಧ ಇಲಾಖೆಗಳ ಅನುದಾನ ಪಡೆಯಲಾಗಿದೆ, ಅಲ್ಲದೇ ಕೇವಲ ೨೦ ಅಡಿ ರಸ್ತೆ, ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಕೊಳಚೆ ಪ್ರದೇಶವಾಗುತ್ತದೆ ಎನ್ನುವ ಆತಂಕವಿದೆ, ಕೂಡಲೇ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ತಡೆ ನೀಡಬೇಕು. ಮರು ಪರಿಶೀಲನೆಗೆ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುವಂತೆ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸಮರ್ಪಕ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು, ಬಾಕಿ ಉಳಿದಿರುವ ಬಿಲ್‌ಗಳನ್ನು ಶನಿವಾರದೊಳಗೆ ಪಾವತಿ ಮಾಡಬೇಕು, ಬರದ ಸಂದರ್ಭದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದAತೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು, ಕಿರುಗಾವಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಆಗತ್ಯವಿರುವ ವಿದ್ಯುತ್ ಪೂರೈಕೆಗೆ ಎದುರಾಗಿರುವ ಸಮಸ್ಯೆ ಬಗೆಹರಿಸಿ ತಕ್ಷಣವೇ ಕೇಬಲ್ ಪೂರೈಕೆಗೆ ಕ್ರಮ ವಹಿಸುವಂತೆ ಸೆಸ್ಕಾಂ ಎಇಇಗೆ ಸೂಚನೆ ನೀಡಿದರು.

ಕಿರುಗಾವಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಸೌಲಭ್ಯವಿದ್ದರೂ ಇಲ್ಲಿಯವರೆಗೆ ಸೂನ್ಯ ಸಾಧನೆ ಮಾಡಿರುವ ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ ಅವರು, ಸರ್ಕಾರಿ ಆಸ್ಪತ್ರೆಗಳ ೨೦೦ ಮೀಟರ್ ದೂರದಲ್ಲಿ ಯಾವುದೇ ಖಾಸಗಿ ಲ್ಯಾಬ್‌ಗಳು ಇರುವಂತಿಲ್ಲ, ಅಂತಹವುಗಳನ್ನು ತಹಶೀಲ್ದಾರ್ ಹಾಗೂ ಪೊಲೀಸರ ಜೊತೆಗೂಡಿ ಮುಚ್ಚಿಸಲು ಮುಂದಾಗಬೇಕು,ಹಾಗೂ ಜಾನುವಾರುಗಳಿಗೆ ಮೇವು ಔಷಧಿಕೊರತೆಯಾಗದಂತೆ ಜಾಗೃತಿ ವಹಿಸಬೇಕೆಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಇಲಾಖೆ ವ್ಯಾಪ್ತಿಯ ಫಲಾನುಭವಿಗಳ ಅಂಕಿ ಅಂಶಗಳಲ್ಲಿ ಸಾಕಷ್ಟು ವ್ಯಾತ್ಯಾಸಗಳಿವೆ, ಅದನ್ನು ಸರಿಪಡಿಸುವುದರ ಜೊತೆಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಆರೋಗ್ಯ ಇಲಾಖೆ ಜೊತೆಗೂಡಿ ಗರ್ಭಿಣಿ ಹಾಗೂ ಬಾಣಂತಿಯರ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಬೇಕು, ಪ್ರಮುಖವಾಗಿ ಕಾಡಂಚಿನ ಜನರ ಯೋಗಕ್ಷೇಮದ ಬಗ್ಗೆ ಸೌಲಭ್ಯಗಳನ್ನು ಒದಗಿಸಲು ಅರಣ್ಯ ಇಲಾಖೆ ಸ್ಥಳೀಯ ಆಡಳಿತದೊಂದಿಗೆ ಮುಂದಾಗಬೇಕೆಂದು ಸೂಚಿಸಿದರು.

ಪಟ್ಟಣದ ಆಯುರ್ವೇದಿಕ್ ವೈದ್ಯರು ಸರಿಯಾದ ಸಮಯಕ್ಕೆ ಹಾಜರಾಗುವುದಿಲ್ಲಎನ್ನುವ ಆರೋಪ ಕೇಳಿಬರುತ್ತಿದ್ದು, ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಾರ್ವಜನಿಕರ ಸೇವೆಗೆ ಆಯ್ಕೆಯಾಗಿರುವ ಅಧಿಕಾರಿಗಳು ಕಟ್ಟೆಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು, ತಮ್ಮ ಇಲಾಖೆಗೆ ಮಾತ್ರ ಸೀಮಿತಗೊಳ್ಳದೇ ತಾಲ್ಲೂಕಿನ ಜವಾಬ್ದಾರಿಯಲ್ಲಿ ಒಂದು ಕುಟುಂಬದAತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆಗೂಡಿ ತಂಡವನ್ನು ರಚನೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ನಿವಾರಿಸಬೇಕೆಂದು ತಿಳಿಸಿದರು.

ಇತ್ತಿಚಿಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ, ಜನಜಾನುವಾರುಗಳಿಗೆ ರೋಗ ಹಾಗೂ ಮೇವಿನ ಕೊರತೆ ಹೆಚ್ಚಾಗಿ ಕಂಡುಬರುವುದರಿಂದ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಸಮರ್ಪಕ ಔಷಧಿ, ಮೇವು ಸಮಸ್ಯೆಗಳನ್ನು ನಿವಾರಿಸಬೇಕು, ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಉಲ್ಣಣಗೊಳ್ಳುವ ಆತಂಕ ಇರುವುದರಿಂದ ರೋಗಿಗಳನ್ನು ಹೊರಕ್ಕೆ ಕಳುಹಿಸದೇ ಇಲ್ಲಿನ ಆಸ್ಪತ್ರೆಯಲ್ಲಿಯೇ ಸೂಕ್ತ ಚಿಕಿತ್ಸೆಯನ್ನು ನೀಡಬೇಕೆಂದು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಬ್ಬಣಿ, ಕಗ್ಗಲಿಪುರ, ಸುಜ್ಜಲೂರು, ಧನಗೂರು, ಹಲಸಹಳ್ಳಿ, ದಬ್ಬಹಳ್ಳಿ ತುರುಗನೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿಕೊಂಡಿದ್ದ ನೂರಾರು ಎಕರೆ ಜಮೀನುಗಳನ್ನು ವಶಕ್ಕೆ ಪಡೆಯಲಾಗಿದೆ,

ಉಪವಿಭಾಗಧಿಕಾರಿಗಳ ನೇತೃತ್ವದಲ್ಲಿ ಅಕ್ರಮ ಸಾಗುವಳಿಯ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದ್ದು, ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿ ಹೊರ ಬೀಳಲಿದೆ ಎಂದು ತಹಶೀಲ್ದಾರ್ ಕೆ.ಎನ್, ಲೊಕೇಶ್ ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಕೆ.ಎನ್. ಲೋಕೇಶ್, ಡಿವೈಎಸ್‌ಪಿ ಕಷ್ಣಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಎಲ್. ಮಮತ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!